ನೆಲ್ಯಾಡಿ ಶ್ರೀ ರಾಮ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ

ಪುತ್ತೂರು

news-details

ಶ್ರೀರಾಮ ಶಾಲೆ ಸೂರ್ಯ ನಗರ ನೆಲ್ಯಾಡಿ ಇಲ್ಲಿ ದಿನಾಂಕ 1/11/24 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಪರಿವೀಕ್ಷಕರಾದ ಭಗಿನಿ ಮೀನಾಕ್ಷಿ ಮಾತಾಜಿಯವರು ಆಗಮಿಸಿದರು, ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀಯುತ ಮೂಲಚಂದ್ರ ಕಾಂಚನ ಹಾಗೂ ಶಾಲಾ ಮುಖ್ಯ ಗುರುಗಳಾದ ಶ್ರೀಯುತ ಗಣೇಶ್ ವಾಗ್ಲೇ ಅವರು ಉಪಸ್ಥಿತರಿದ್ದರು.
ಮೀನಾಕ್ಷಿ ಮಾತಾಜಿಯವರು ಕನ್ನಡ ಹಾಗೂ ಕನ್ನಡ ರಾಜ್ಯೋತ್ಸವದ ಬಗ್ಗೆ ಹಿನ್ನೆಲೆಯನ್ನು ತಿಳಿಸಿದರು. ಶ್ರೀಯುತ ಮೂಲ ಚಂದ್ರ ಕಾಂಚನ ಇವರು ಕನ್ನಡ ಭಾಷೆ ಹಾಗೂ ಕರ್ನಾಟಕದ ಹಿರಿಮೆಯನ್ನು ತಿಳಿಸಿ, ನಮ್ಮ ಮಾತೃಭಾಷೆ, ರಾಜ್ಯಭಾಷೆ ಹಾಗೂ ರಾಷ್ಟ್ರಭಾಷೆಯನ್ನು ಗೌರವಿಸಬೇಕು ಎಂದು ತಿಳಿಸಿದರು. ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿದರು. ಶಾಲೆಯ ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕುಮಾರಿ ದಿವ್ಯಶ್ರೀ ಮಾತಾಜಿ ಸ್ವಾಗತಿಸಿ. ಕುಮಾರಿ ಮಾನ್ಯ ಶ್ರೀ ಮಾತಾ ಜಿ ಧನ್ಯವಾದ ಗೈದು, ಅಕ್ಷತಾ ಮಾತಾಜಿ ಕಾರ್ಯಕ್ರಮವನ್ನು ನಿರೂಪಿಸಿದರು

news-details