ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕಡಬ ತಾಲೂಕು ನೆಲ್ಯಾಡಿ ವಲಯ. ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭ ವು ಸಿರಿ ಘಟಕ ನೆಲ್ಯಾಡಿಯಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯದ ಅಧ್ಯಕ್ಷರಾದ ಜಯಾನಂದ ಬಂಟ್ರಿಯಾಲ್ ರವರು ನೆರವೇರಿಸಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರಿಗೆ ಉತ್ತಮ ಕಾರ್ಯಕ್ರಮ ನೀಡುತ್ತಿದ್ದು ಈ ದಿನ ಹೊಲಿಗೆ ತರಬೇತಿಯನ್ನು ಆಯೋಜಿಸಿ ಸ್ವಾವಲಂಬಿ ಜೀವನ ನಡೆಸಲು ಪ್ರೇರಣೆ ನೀಡಿದ್ದು ಹೆಮ್ಮೆಯ ವಿಚಾರ ಎಂದು ತಿಳಿಸಿ ಶುಭ ಹಾರೈಸಿದರು.ಕೌಕ್ರಾಡಿ ಒಕ್ಕೂಟದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವೇದಿಕೆಯಲ್ಲಿ ನೆಲ್ಯಾಡಿ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ರಮೇಶ್ ಬಾಣಜಾಲು, ವಲಯ ಮೇಲ್ವಿಚಾರಕರಾದ ಆನಂದ ಡಿ.ಬಿ, ಹೊಲಿಗೆ ತರಬೇತಿ ಶಿಕ್ಷಕಿ ಗೀತಾ,ನೆಲ್ಯಾಡಿ ಒಕ್ಕೂಟದ ಉಪಾಧ್ಯಕ್ಷರಾದ ಸುಮಿತ್ರಾ, ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಡಬ ತಾಲುಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಚೇತನ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಸೇವಾಪ್ರತಿನಿಧಿ ಹೇಮಾವತಿ ಜೆ ಕಾರ್ಯಕ್ರಮ ನಿರೂಪಿಸಿ ನಮಿತಾ ಎಸ್ ನೆಟ್ಟಿ ವಂದಿಸಿದರು. ವಲಯದ ಸೇವಾ ಪ್ರತಿನಿಧಿಗಳಾದ ವೇದ ಪಿ, ಕವಿತಾ, ಸುಮನ ಕಾರ್ಯಕ್ರಮಕ್ಕೆ ಸಹಕರಿಸಿದರು. ಹೊಲಿಗೆ ತರಬೇತಿಯನ್ನು ಪಡೆಯಲು ಬಂದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.