ಪುತ್ತೂರು ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ ಬೆಟ್ಟoಪಾಡಿ ಇದರ ಆಶ್ರಯ ದಲ್ಲಿ ಬೆಟ್ಟoಪಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಯು ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನ. 11ರಂದು ನಡೆಯಿತು.
ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ವಿಷ್ಣು ಪ್ರಸಾದ್ ಮಾತನಾಡಿ ಪ್ರತಿಭೆ ಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಪ್ರತಿಭಾ ಕಾರಂಜಿ ಯಿಂದ ಸಾಧ್ಯ ವಾಗುತ್ತಿದೆ.ಬಾಲ್ಯದಲ್ಲಿ ಮಕ್ಕಳ ಪ್ರತಿಭೆಗಳಿಗೆ ಪ್ರೊತ್ಸಾಹ ಸಿಕ್ಕಿದಾಗ ಜೀವನದಲ್ಲಿ ಯಶಸ್ವಿ ಯಾಗಲು ಸಾಧ್ಯ ಎಂದು ಹೇಳಿದರು.
ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಹೇಶ್ ಕೆ ದೀಪ ಬೆಳಗಿಸಿ ಪ್ರತಿಭಾ ಕಾರಂಜಿಗೆ ಚಾಲನೆ ನೀಡಿದರು.
ಕಕ್ಕೂರು ಸರಕಾರಿ ಶಾಲೆಯ ನಿವೃತ್ತ ಶಿಕ್ಷಕರಾದ ವಿಷ್ಣು ಭಟ್ ರವರನ್ನು ಗೌರವಿಸಲಾಯಿತು.
ಪ್ರಿಯದರ್ಶಿನಿ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ರಂಗನಾಥ ರೈ ಗುತ್ತು ಅಧ್ಯಕ್ಷ ತೆ ವಹಿಸಿ ಮಾತನಾಡಿ ಮಕ್ಕಳಲ್ಲಿ ಇರುವ ಪ್ರತಿಭೆಗಳ ಅನಾವರಣಕ್ಕೆ ಇಂತಹ ಕಾರ್ಯಕ್ರಮ ಸಹಕಾರಿ. ಉತ್ತಮ ಯೋಜನೆಗಳನ್ನು ರೂಪಿಸಿ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕಕ್ಕೂರು ಶಾಲೆಯ ನಿವೃತ್ತ ಶಿಕ್ಷಕರಾದ ವಿಷ್ಣು ಭಟ್ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸತೀಶ್ ರೈ ಕಟಾವು, ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ನಾಗೇಶ್ ಪಾಟಾಳಿ,ಪ್ರಿಯದರ್ಶಿನಿ ಶಾಲೆಯ ಮುಖ್ಯ ಶಿಕ್ಷಕರಾದ ರಾಜೇಶ್ ನೆಲ್ಲಿತ್ತಡ್ಕ ಉಪಸ್ಥಿತರಿದ್ದರು.
ಬೆಟ್ಟಂಪಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಹಿರಿಯ ವಿಭಾಗ 15, ಕಿರಿಯ ವಿಭಾಗ 12 ಸ್ಪರ್ಧೆಗಳು ನಡೆದವು.
ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕ್ಲಸ್ಟರ್ ನ ಸಿ ಆರ್ ಪಿ ಪರಮೇಶ್ವರಿ ಸ್ವಾಗತಿಸಿದರು. ಶಿಕ್ಷಕಿ ರಕ್ಷಿತಾ ವಂದಿಸಿದರು. ಶಿಕ್ಷಕಿ ಶರ್ಮಿಳಾ ಕಾರ್ಯಕ್ರಮ ನಿರೂಪಿಸಿದರು.