ನ.14: ಬೆಟ್ಟಂಪಾಡಿಯಲ್ಲಿ ಜಿಲ್ಲಾ ಮಟ್ಟದ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭ

ಪುತ್ತೂರು

news-details

ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಮಂಗಳೂರು, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ನಿಯಮಿತ ಮಂಗಳೂರು, ಪುತ್ತೂರು ಮತ್ತು ಕಡಬ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸಹಕಾರ ಮತ್ತು ಸಹಭಾಗಿತ್ವದಲ್ಲಿ ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ನೇತೃತ್ವದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ -2024, ಜಿಲ್ಲಾ ಮಟ್ಟದ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭ ಹಾಗೂ ಸಹಕಾರ ಸಚಿವಾಲಯ ನೂತನ ಪ್ರಯತ್ನಗಳ ಮೂಲಕ ಸಹಕಾರ ಚಳುವಳಿಯನ್ನು ಬಲಪಡಿಸುವುದು ಇದರ ಬಗ್ಗೆ ವಿಚಾರಗೋಷ್ಠಿಯು ನ.14ರಂದು ಬೆಟ್ಟಂಪಾಡಿ ಸಿ.ಎ ಬ್ಯಾಂಕ್ ವಠಾರದಲ್ಲಿ ನಡೆಯಲ್ಲಿದೆ.
ಮಂಗಳೂರು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ. ಇದರ ಅಧ್ಯಕ್ಷ ಸಹಕಾರ ರತ್ನ ಡಾ.ಎಂ. ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ರವರಿಂದ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ದ.ಕ.ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ಸುಚರಿತ ಶೆಟ್ಟಿ ಮೆರವಣಿಗೆಯನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಮಂಗಳೂರು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ.ನ ನಿರ್ದೇಶಕರಾದ ಶಶಿಕುಮಾರ್ ಬಾಲ್ಯೊಟ್ಟು, ಎಸ್ ಬಿ ಜಯರಾಮ್ ರೈ,ಮಂಗಳೂರು ಸ್ಕೇಡ್ಸ್ ಅಧ್ಯಕ್ಷರಾದ ರವೀಂದ್ರ ಕಂಬಳಿ, ಪುತ್ತೂರು ಟಿಎಪಿಸಿಎಂಎಸ್ ಅಧ್ಯಕ್ಷರಾದ ಕೃಷ್ಣ ಕುಮಾರ್ ರೈ,ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾಶ್ರೀ,ಮಂಗಳೂರು ಸಹಕಾರ ಸಂಘಗಳ ಉಪನಿಬಂಧಕರರಾದ ರಮೇಶ್ ಎಚ್ ಎನ್,ಪುತ್ತೂರು ತಾಲೂಕು ಸಹಕಾರಿ ಯೂನಿಯನ್ ಅಧ್ಯಕ್ಷರಾದ ಪ್ರವೀಣ್ ಕುಮಾರ್ ರೈ ಮೇನಾಲ ಭಾಗವಹಿಸಲಿದ್ದಾರೆ. ಸಹಕಾರ ಸಚಿವಾಲಯ ನೂತನ ಪ್ರಯತ್ನಗಳ ಮೂಲಕ ಸಹಕಾರ ಚಳುವಳಿಯನ್ನು ಬಲಪಡಿಸುವುದು ಇದರ ಬಗ್ಗೆ ವಿಚಾರಗೋಷ್ಠಿಯಲ್ಲಿ ಮೂಡಬಿದ್ರೆ ಕೆಪಿಸಿಎಂ ಪ್ರಾಂಶುಪಾಲೆ ಬಿಂದು ನಾಯರ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ ಎಂದು ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ.ಅಧ್ಯಕ್ಷರಾದ ಕೆ ಎಸ್ ರಂಗನಾಥ ರೈ, ಉಪಾಧ್ಯಕ್ಷರಾದ ಗಿರೀಶ್ವರ ಭಟ್ ಯಂ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ ರಾಮಯ್ಯ ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

news-details