ಬೆಟ್ಟಂಪಾಡಿಯಲ್ಲಿ ಜಿಲ್ಲಾ ಮಟ್ಟದ ಸಹಕಾರ ಸಪ್ತಾಹ ಕ್ಕೆ ಚಾಲನೆ ,ಮೆರವಣಿಗೆ, ಧ್ವಜಾರೋಹಣ

ಪುತ್ತೂರು

news-details

ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಮಂಗಳೂರು, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ನಿಯಮಿತ ಮಂಗಳೂರು, ಪುತ್ತೂರು ಮತ್ತು ಕಡಬ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸಹಕಾರ ಮತ್ತು ಸಹಭಾಗಿತ್ವದಲ್ಲಿ ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ನೇತೃತ್ವದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ -2024, ಜಿಲ್ಲಾ ಮಟ್ಟದ ಸಹಕಾರ ಸಪ್ತಾಹಕ್ಕೆ ನ.14ರಂದು ಬೆಟ್ಟಂಪಾಡಿ ಸಿ.ಎ ಬ್ಯಾಂಕ್ ವಠಾರದಲ್ಲಿ ಚಾಲನೆ ನೀಡಲಾಯಿತು.
ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಅಧ್ಯಕ್ಷ ರಂಗನಾಥ ರೈ ಗುತ್ತು ಇವರ
ಅಧ್ಯಕ್ಷತೆಯಲ್ಲಿ ಮಂಗಳೂರು ದ.ಕ.ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ಸುಚರಿತ ಶೆಟ್ಟಿ ಉದ್ಘಾಟಿಸಿದರು.ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಇವರು ಮೆರವಣಿಗೆ ಚಾಲನೆ ನೀಡಿದರು. ಪ್ರಸಾದ ಕೌಶಲ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.
ಮಂಗಳೂರು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ.ನ ನಿರ್ದೇಶಕರಾದ ಶಶಿಕುಮಾರ್ ಬಾಲ್ಯೊಟ್ಟು, ಎಸ್ ಬಿ ಜಯರಾಮ್ ರೈ,ಮಂಗಳೂರು ಸ್ಕೇಡ್ಸ್ ಅಧ್ಯಕ್ಷರಾದ ರವೀಂದ್ರ ಕಂಬಳಿ, ಪುತ್ತೂರು ಟಿಎಪಿಸಿಎಂಎಸ್ ಅಧ್ಯಕ್ಷರಾದ ಕೃಷ್ಣ ಕುಮಾರ್ ರೈ,ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾಶ್ರೀ,ಮಂಗಳೂರು ಸಹಕಾರ ಸಂಘಗಳ ಉಪನಿಬಂಧಕರರಾದ ರಮೇಶ್ ಎಚ್ ಎನ್,ಪುತ್ತೂರು ತಾಲೂಕು ಸಹಕಾರಿ ಯೂನಿಯನ್ ಅಧ್ಯಕ್ಷರಾದ ಪ್ರವೀಣ್ ಕುಮಾರ್ ರೈ ಮೇನಾಲ, ಮೂಡಬಿದ್ರೆ ಕೆಪಿಸಿಎಂ ಪ್ರಾಂಶುಪಾಲೆ ಬಿಂದು ನಾಯರ್, ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ.ಅಧ್ಯಕ್ಷರಾದ ಕೆ ಎಸ್ ರಂಗನಾಥ ರೈ, ಉಪಾಧ್ಯಕ್ಷರಾದ ಗಿರೀಶ್ವರ ಭಟ್ ಯಂ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ ರಾಮಯ್ಯ ರೈ ಮತ್ತಿತರರು ಉಪ ಸ್ಥಿತರಿದ್ದರು.

news-details