ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವ ಅ.3 ರಿಂದ 14ರವರೆಗೆ ವೈಭವದಿಂದ ನಡೆಯಲಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಭಿವೃದ್ಧಿ ರೂವಾರಿ ಹಾಗೂ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಹೇಳಿದರು.

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ದಸರಾ ಅಂಗವಾಗಿ ಪ್ರತಿನಿತ್ಯ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ, ಅನ್ನದಾನ ಸೇವೆಗಳು ನಡೆಯಲಿದೆ. ಈ ಬಾರಿಯ ದಸರಾಕ್ಕೂ ದೇಶ-ವಿದೇಶದಿಂದ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದ್ದು, ಇದಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದರು.

ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಮಾತನಾಡಿ, ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ಅವರು ವೈಭವದ ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ. ಅ.3ರಂದು ಬೆಳಗ್ಗೆ 8.30ಕ್ಕೆ ಗುರುಪ್ರಾರ್ಥನೆ, ಪುಣ್ಯಾಹ ಹೋಮ, ನವಕಲಶಾಭಿಷೇಕ ಧರ್ನುಲಗ್ನ, ಕಲಶ ಪ್ರತಿಷ್ಠೆಘಿ, ನವದುರ್ಗೆಯರ ಮತ್ತು ಶಾರದಾ ಪ್ರತಿಷ್ಠೆಘಿ. ದಸರಾ ಉದ್ಘಾಟನೆ, ಬಳಿಕ ಪುಷ್ಪಾಲಂಕಾರ ಮಹಾಪೂಜೆ, 12.30ರಿಂದ ಅನ್ನಸಂತರ್ಪಣೆ. ಭಜನಾ ಕಾರ್ಯಕ್ರಮ, ಶ್ರೀ ದೇವಿ ಪುಷ್ಪಾಲಂಕಾರ ಮಹಾಪೂಜೆ ಉತ್ಸವ ನಡೆಯಲಿದೆ. ಅ.4ರಂದು ಬೆಳಗ್ಗೆ 10 ಕ್ಕೆ ದುರ್ಗಾಹೋಮ, 12.30ರಿಂದ ಅನ್ನಸಂತರ್ಪಣೆ. ಅ.5ರಂದು ಬೆಳಗ್ಗೆ ಗಂಟೆ 10 ಕ್ಕೆ ಪಂಚ ದುರ್ಗಾಹೋಮ, 12.30ರಿಂದ ಅನ್ನಸಂತರ್ಪಣೆ, ಅ.6ರಂದು ಬೆಳಗ್ಗೆ ಗಂಟೆ 10 ಕ್ಕೆ ಆರ್ಯ ದುರ್ಗಾಹೋಮ, 12.30ರಿಂದ ಅನ್ನಸಂತರ್ಪಣೆ. ಅ.7ರಂದು ಬೆಳಗ್ಗೆ 10 ಕ್ಕೆ ಅಂಬಿಕಾ ದುರ್ಗಾ ಹೋಮ, 12.30ರಿಂದ ಅನ್ನಸಂತರ್ಪಣೆ ನಡೆಯಲಿದೆ ಎಂದರು.

ಅ. 8ರಂದು ಬೆಳಗ್ಗೆ ಗಂಟೆ 10.00ಕ್ಕೆ ಭಗವತೀ ದುರ್ಗಾ ಹೋಮ (ಲಲಿತಾ ಪಂಚಮಿ) 12.30ರಿಂದ ಅನ್ನಸಂತರ್ಪಣೆ, ಅ. 9ರಂದು ಬೆಳಗ್ಗೆ ಗಂಟೆ 9 ಕ್ಕೆ ಸಾಮೂಹಿಕ ಚಂಡಿಕಾ ಹೋಮ, ಕುಮಾರಿ ದುರ್ಗಾ ಹೋಮ, ಪುಷ್ಪಾಲಂಕಾರ ಮಹಾಪೂಜೆ, 12.30ರಿಂದ ಅನ್ನಸಂತರ್ಪಣೆ. ಅ.10ರಂದು ಬೆಳಗ್ಗೆ ಗಂಟೆ 10 ಕ್ಕೆ ಮಹಿಷರ್ದಿನಿ ದುರ್ಗಾ ಹೋಮ, 12.30ರಿಂದ ಅನ್ನಸಂತರ್ಪಣೆ. ಅ.11ರಂದು ಬೆಳಗ್ಗೆ ಗಂಟೆ 10 ಕ್ಕೆ ಚಂಡಿಕಾಹೋಮ ಹಗಲೋತ್ಸವ, 12.30ರಿಂದ ಅನ್ನಸಂತರ್ಪಣೆ. ಅ.12ರಂದು ಬೆಳಗ್ಗೆ ಗಂಟೆ 10 ಕ್ಕೆ ಸರಸ್ವತಿ ದುರ್ಗಾಹೋಮ, 11.30ರಿಂದ ಶತ ಸೀಯಾಳಾಭಿಷೇಕ, ಶಿವಪೂಜೆ (ಮಹಾನವಮಿ), ಮಹಾಅನ್ನಸಂತರ್ಪಣೆ ನೆರವೇರಲಿದೆ ಎಂದರು.

ದೇವಳ ಅಭಿವೃದ್ಧಿ ಸಮಿತಿ ಸದಸ್ಯ ಹರಿಕೃಷ್ಣ ಬಂಟ್ವಾಳ್ ಮಾತನಾಡಿ, ಮಂಗಳೂರು ದಸರಾ ಮಹೋತ್ಸವ ಹಾದು ಹೋಗುವ ರಸ್ತೆ ಸೇರಿದಂತೆ ನಗರದ ಕಟ್ಟಡಗಳನ್ನು ಅಲಂಕರಿಸುವ ಮೂಲಕ ಮಹೋತ್ಸವಕ್ಕೆ ಮತ್ತಷ್ಟು ವೈಭವ ತುಂಬಬೇಕು ಎಂದರು.

ದೇವಸ್ಥಾನದ ಕಾರ್ಯದರ್ಶಿ ಮಾಧವ ಸುವರ್ಣ, ಟ್ರಸ್ಟಿಗಳಾದ ರವಿಶಂಕರ್ ಮಿಜಾರು, ಎಂ. ಶೇಖರ್ ಪೂಜಾರಿ, ಜಗದೀಪ್ ಡಿ. ಸುವರ್ಣ, ದೇವಳ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸಹ-ಉಪಾಧ್ಯಕ್ಷ ಡಾ. ಅನಸೂಯ ಬಿ.ಟಿ. ಸಾಲ್ಯಾನ್, ಉಪಾಧ್ಯಕ್ಷರಾದ ಬಿ.ಜಿ. ಸುವರ್ಣ, ದೇವಳ ಅಭಿವೃದ್ಧಿ ಸಮಿತಿ ಸದಸ್ಯರಾದ ಕಿಶೋರ್ ದಂಡೆಕೇರಿ, ವಾಸುದೇವ ಕೋಟ್ಯಾನ್, ಎಚ್.ಎಸ್. ಜೈರಾಜ್, ಲತೀಶ್ ಎಂ. ಸುವರ್ಣ,ರಾಧಾಕೃಷ್ಣ , ಲೀಲಾಕ್ಷ ಕರ್ಕೇರಾ, ಚಂದನ್‌ದಾಸ್, ಗೌರವಿ ರಾಜಶೇಖರ್, ಕೃತಿನ್ ದೀರಾಜ್ ಅಮೀನ್ ಉಪಸ್ಥಿತರಿದ್ದರು.

ಆದಿಶಕ್ತಿಯೊಂದಿಗೆ ಶ್ರೀ ಶಾರದ ಮಾತೆಯ ಶೋಭಾಯಾತ್ರೆ

ಅ.6ರಂದು ಬೆಳಗ್ಗೆ 5.30ಕ್ಕೆ ಹ್ಾ ಮ್ಯಾರಥಾನ್ ನಡೆಯಲಿದ್ದು, 2ಸಾವಿರಕ್ಕೂ ಅಧಿಕ ಮಂದಿ ಸ್ಪರ್ಧೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಪ್ರತಿನಿತ್ಯ ಸಂಜೆ ಸಂತೋಷಿ ಕಲಾ ಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಅ.13ರಂದು ಬೆಳಗ್ಗೆ ಗಂಟೆ 10 ರಿಂದ ವಾಗೀಶ್ವರಿ ದುರ್ಗಾಹೋಮ, 12.30ಕ್ಕೆ ಶಿವಪೂಜೆ. ಸಂಜೆ 4 ರಿಂದ ಮಹಾಗಣಪತಿ, ನವದುರ್ಗೆ, ಆದಿಶಕ್ತಿಯೊಂದಿಗೆ ಶ್ರೀ ಶಾರದ ಮಾತೆಯ ಶೋಭಾಯಾತ್ರೆ ನಡೆಯಲಿದೆ. ಅ.14ರಂದು ಬೆಳಗ್ಗೆ ಪ್ರಾತಃಕಾಲ ಮಂಟಪ ಪೂಜೆ ಬಳಿಕ ಶಾರದಾ ವಿಸರ್ಜನೆ, ರಾತ್ರಿ 7 ರಿಂದ ಭಜನಾ ಕಾರ್ಯಕ್ರಮ, 8ರಿಂದ ಗುರುಪೂಜೆ ನಡೆಯಲಿದೆ ಎಂದು ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್ ಹೇಳಿದರು.

ಸೆ.13ರಂದು ಭವ್ಯ ಶೋಭಾಯಾತ್ರೆ

ಅ.13ರ ಭಾನುವಾರ ಸಂಜೆ 4.00ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಮಂಗಳೂರು ದಸರಾ ಬೃಹತ್ ಶೋಭಾಯಾತ್ರೆ ಆರಂಭವಾಗಲಿದೆ. ಕೇರಳದ ಮೈನವಿರೇಳಿಸುವ ಚೆಂಡೆ ವಾದ್ಯ, ರಾಜ್ಯದ ನಾನಾ ಕಡೆಯಿಂದ ಆಗಮಿಸುವ ಜಾನಪದ, ಸಾಂಸ್ಕೃತಿಕ ಹಿನ್ನಲೆಯ ನೃತ್ಯ ತಂಡಗಳು ನಾನಾ ಜಿಲ್ಲೆ, ರಾಜ್ಯಗಳ ಕಲಾ ತಂಡಗಳು, ಸ್ತಬ್ದ ಚಿತ್ರಗಳು ಭಾಗವಹಿಸಲಿವೆ ಎಂದು ದೇವಸ್ಥಾನದ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಹೇಳಿದರು.