ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲವು ಸಾಧಿಸಿದ್ದಾರೆ.
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ , ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ,ಶಿಗ್ಗಾಂವಿಯಲ್ಲಿ ಯಾಸಿರ್ ಅಹಮದ್ ಖಾನ್ ಪಠಾಣ್ ಸಾಧಿಸುವುದರ ಮೂಲಕ ಕಾಂಗ್ರೆಸ್ ಉಪ ಚುನಾವಣೆ ಭರ್ಜರಿ ಗೆಲುವು ಸಾಧಿಸಿದೆ.
ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ,ಸಂಡೂರಿನಲ್ಲಿ ಬಿಜೆಪಿಅಭ್ಯರ್ಥಿ ಬಂಗಾರು ಹನುಮಂತು,ಶಿಗ್ಗಾಂವಿಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರಾಭವಗೊಂಡಿದ್ದಾರೆ