ಸರಕಾರಿ ಜಾಗ ಒತ್ತುವರಿ : ಸ್ಥಳಕ್ಕೆ ಕಂದಾಯ ಇಲಾಖೆ ಯ ಅಧಿಕಾರಿಗಳು , ಪೊಲೀಸರ ಭೇಟಿ, ಸರ್ವೇ ಕಾರ್ಯ ಕ್ಕೆ ಸಿದ್ದತೆ

ಪುತ್ತೂರು

news-details

ನೆಟ್ಟಣಿಗೆ ಮುಡ್ನೂರು ಗ್ರಾಮದ ಸುರುಳಿಮೂಲೆ ಸರಕಾರಿ ಶಾಲೆಯ ಎದುರುಗಡೆ ಇರುವ ಸರ್ವೇ ನಂಬರ್ 296ರಲ್ಲಿ ಇರುವ ಸರಕಾರಿ ಜಾಗವನ್ನು ಒತ್ತುವರಿ ಮಾಡಿ ದ್ದಾರೆ ಎಂಬ ದೂರಿನ ಹಿನ್ನಲೆ ಯಲ್ಲಿ ಸಂಪ್ಯ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು,ಕಂದಾಯ ನಿರೀಕ್ಷಕರು, ನೆಟ್ಟಣಿಗೆ ಮುಡ್ನೂರು ಪಂಚಾಯತ ಅಭಿವೃದ್ಧಿ ಅಧಿಕಾರಿ,ಗ್ರಾಮ ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು. ಸರಕಾರಿ ಜಾಗವನ್ನು ಉಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಯತ್ನಿಸಬೇಕು ಎಂದು ಅಲ್ಲಿದ್ದ ಗ್ರಾಮಸ್ಥರು ಒತ್ತಾಯಿಸಿದರು.
ಸರಕಾರಿ ಜಾಗವನ್ನು ಬೇರೆ ಬೇರೆ ವ್ಯಕ್ತಿಗಳು ಒತ್ತುವರಿ ಮಾಡುತ್ತಿದ್ದ ವಿಚಾರದಲ್ಲಿ ಕಂದಾಯ ಇಲಾಖೆ ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಎಷ್ಟು ದೂರು ನೀಡಿದ್ದರು ಅವರು ಆ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು
ಜಾಗದ ಸರ್ವೇ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರು,ಸದಸ್ಯರು,ರೈತ ಸಂಘದ ಸದಸ್ಯರುಗಳು, ವಿವಿಧ ಸಂಘ-ಸಂಸ್ಥೆಗಳ ನಾಯಕರುಗಳು ಉಪಸ್ಥಿತರಿದ್ದರು.
ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಆಗಮಿಸಿದ್ದರು.

news-details