ಪಾಣಾಜೆ ಗ್ರಾಮದ ಆರ್ಲಪದವು ಕಿನ್ನಿಮಾಣಿ-ಪೂಮಾಣಿ, ಪಿಲಿಭೂತ ದೈವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ವು ಡಿ. 3ರಂದು ದೈವಸ್ಥಾನದ ವಠಾರ ದಲ್ಲಿ ನಡೆಯಲಿದೆ. ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಬಿಡುಗಡೆ ಗೊಳಿಸಲಿದ್ದಾರೆ. ಅನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀಕೃಷ್ಣ ಬೋಳಿಲ್ಲಾಯ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನರಿಮೊಗರು ಸಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ಭಾಸ್ಕರ್ ಆಚಾರ್ ಹಿಂದಾರ್, ಪಾಣಾಜೆ ಸುಬೋಧ ಪ್ರೌಢಶಾಲೆಯ ಸಂಚಾಲಕ ರಾದ ಮಹಾಬಲೇಶ್ವರ ಭಟ್ ಗಿಳಿಯಾಲು, ಲೀಲಾವತಿ ಕೆ ಶೆಟ್ಟಿ ಕೋಟೆ, ಉದ್ಯಮಿ ರೋಶನ್ ರೈ ಬನ್ನೂರು, ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರ ರಂಜಿತ್ ಬಂಗೇರ, ಚಿಕ್ಕಮಂಗಳೂರು ಶಾ ಚಾರಿ ಟೇಬಲ್ ಟ್ರಸ್ಟ್ ನ ಸೀತಾರಾಮ ಭರಣ್ಯ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಸಾರ್ವಜನಿಕರಿಗೆ ಭಾಗವಹಿಸಬೇಕಾಗಿ ಪ್ರಕಟನೆ ತಿಳಿಸಿದೆ.
ದೈವ ಸ್ಥಾನಗಳ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು ಭಾನುವಾರ ಭಕ್ತರಿಂದ ಕರ ಸೇವೆ ನಡೆಯಿತು. ನೂರಾರು ಭಕ್ತರು ಕರಸೇವೆಯಲ್ಲಿ ಭಾಗವಹಿಸಿದರು.