ಪಾಣಾಜೆ ಗ್ರಾಮದ ಆರ್ಲಪದವು ಕಿನ್ನಿಮಾಣಿ-ಪೂಮಾಣಿ, ಪಿಲಿಭೂತ ದೈವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಡಿ.3ರಂದು ಪಾಣಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.
ದೈವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಬಿಡುಗಡೆ ಗೊಳಿಸಿದ್ದರು.
ಅನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀಕೃಷ್ಣ ಬೋಳಿಲ್ಲಾಯ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜೀರ್ಣೋದ್ಧಾರ ಸಮಿತಿ ಸಂಚಾಲಕ ಶಶಿಕುಮಾರ್ ಬಾಲ್ಯೊಟ್ಟು ಪ್ರಸ್ತಾವನೆಗೈದರು.
ನರಿಮೊಗರು ಸಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ಭಾಸ್ಕರ್ ಆಚಾರ್ ಹಿಂದಾರ್, ಪಾಣಾಜೆ ಸುಬೋಧ ಪ್ರೌಢಶಾಲೆಯ ಸಂಚಾಲಕರಾದ ಮಹಾಬಲೇಶ್ವರ ಭಟ್ ಗಿಳಿಯಾಲು, ಮಂಗಳೂರು ಕೆಎಂಎಫ್ ನಿರ್ದೇಶಕ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರ್,ಲೀಲಾವತಿ ಕೆ. ಶೆಟ್ಟಿ ಕೋಟೆ, ಉದ್ಯಮಿ ರೋಶನ್ ರೈ ಬನ್ನೂರು, ಚಿಕ್ಕಮಂಗಳೂರು ಶಾ ಚಾರಿಟೇಬಲ್ ಟ್ರಸ್ಟ್ ನ ಸೀತಾರಾಮ ಭರಣ್ಯ,
ವಿಠಲ ರೈ ಬಾಲ್ಯೊಟ್ಟು ಗುತ್ತು , ಕಾರ್ಯಾಧ್ಯಕ್ಷ ತಮ್ಮಣ್ಣ ನಾಯ್ಕ ಸುಡುಕುಳಿ,ಕಾರ್ಯದರ್ಶಿ ವಿಶ್ವನಾಥ ಪೈ ಕೊಂದಲ್ಕಾನ,ಶುಭಕರ ರೈ ಪಡಂಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಲಕ್ಷ್ಮೀನಾರಾಯಣ ರೈ ಕೆದಂಬಾಡಿ ಸ್ವಾಗತಿಸಿದರು.ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಜಗಮೋಹನ್ ರೈ ಸೂರಂಬೈಲು ವಂದಿಸಿದರು.
ಶ್ರೀ ಪ್ರಸಾದ್ ಕಾರ್ಯಕ್ರಮ ನಿರ್ವಹಿಸಿದರು.