ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ.) - 5ನೇ ಜಿಲ್ಲಾ ಸಮ್ಮೇಳನ ದಲ್ಲಿ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ ವಿಜೇತ ರಾದ ಇಂದಾಜೆ ಶ್ರೀನಿವಾಸ್ ನಾಯಕ್ ದಂಪತಿಗಳಿಗೆ ಸನ್ಮಾನ

ಮಂಗಳೂರು

news-details

ಮಂಗಳೂರು: ನವ ದೆಹಲಿಯ ಪಬ್ಲಿಕ್ ರಿಲೇಶನ್ ಕೌನ್ಸಿಲ್ ಒಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ,ಪತ್ನಿ ಖ್ಯಾತ ಹಿಂದೂಸ್ತಾನಿ ಗಾಯಕಿ ವಿಭಾ ಶ್ರೀನಿವಾಸ್ ರವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ.) - 5ನೇ ಜಿಲ್ಲಾ ಸಮ್ಮೇಳನ ದಲ್ಲಿ ಶಾಲು ಹೊಂದಿಸಿ, ಫಲಪುಷ್ಪ, ಹಾರ, ಸ್ಮರಣಿಕೆಯೊಂದಿಗೆ ಗೌರವಿಸಲಾಯಿತು.
ಮೂಡು ಬಿದಿರೆ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನ ದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ,ಸಮ್ಮೇಳನದ ಸರ್ವಾಧ್ಯಕ್ಷ ರಾಗಿ ಹಿರಿಯ ಪತ್ರಕರ್ತ ಶ್ರೀ ಶಿವಸುಬ್ರಮಣ್ಯ ಕೆ., ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್,ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ, ಅದಾನಿ ಗ್ರೂಪ್ ನ ಕಿಶೋರ್ ಆಳ್ವ,ದ. ಕ.ಕೆ ಎಂ ಎಫ್ ಅಧ್ಯಕ್ಷ ರಾದ ಸುಚರಿತ ಶೆಟ್ಟಿ, ಎಂ ಆರ್ ಪಿ ಎಲ್ ನ ಕೃ ಷ್ಣ ಹೆಗ್ಡೆ,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ)ದ ಅಧ್ಯಕ್ಷ. ಶಿವಾನಂದ ತಗಡೂರು, ಮಹಾನಗರ ಪಾಲಿಕೆಯ ಚಂದ್ರಶೇಖರಯ್ಯ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು,ಪ್ರೆಸ್ ಕ್ಲಬ್ ನ ಅಧ್ಯಕ್ಷರಾದ ಹರೀಶ್ ಕುಮಾರ್ ರೈ, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶ್ರೀನಿವಾಸ್ ನಾಯಕ್ ಇಂದಾಜೆ ಅವರು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಳಿಕ ಬ್ರ್ಯಾಂಡ್ ಮಂಗಳೂರು, ಪತ್ರಕರ್ತರ ಗ್ರಾಮ ವಾಸ್ತವ್ಯದ ಮೂಲಕ ಸಮಾಜ ಮುಖಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಕುತ್ಲುರು ಸರಕಾರಿ ಶಾಲೆ ಅಭಿವೃದ್ಧಿ, ಮಂಗಳೂರು ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದ ಅಭಿವೃದ್ಧಿಗೂ ಶ್ರಮಿಸಿದ್ದಾರೆ.

news-details