ಸುಳ್ಯಪದವು ಸರ್ವೋದಯ ವಿದ್ಯಾಸಂಸ್ಥೆಯಲ್ಲಿ ಭಾನುವಾರ ನಡೆದ ಹಿರಿಯ ವಿದ್ಯಾರ್ಥಿಗಳ ಹಾಗೂ ಪೋಷಕರ ಕ್ರೀಡಾಕೂಟದಲ್ಲಿ ರಾಜ್ಯಮಟ್ಟದ ಕಬಡ್ಡಿ ತೀರ್ಪುಗಾರ ಸರ್ವೋದಯ ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿ ಗಣೇಶ್ ಪ್ರಸಾದ್ ಇವರನ್ನು ಶಾಲು ಹಾಕಿ ಪೇಟ ತೊಡಿಸಿ ಫಲ ಪುಷ್ಪ,ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕ ಮಹಾದೇವ ಭಟ್ಟ ಕೊಲ್ಯ, ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಪ್ರಕಾಶ್ ಮರದಮೂಲೆ, ಗಡಿನಾಡ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಚನಿಯಪ್ಪ ನಾಯ್ಕ, ಶಾಲಾ ಮುಖ್ಯ ಶಿಕ್ಷಕ ಸುಖೇಶ್ ರೈ , ಹಿರಿಯ ವಿದ್ಯಾರ್ಥಿಗಳಾದ ಆನಂದ ಪಾದೆಗದ್ದೆ, ಸುಹಾಸ್ ಬಿ, ರಾಜೇಶ್ ಎಂ. ಮತ್ತಿತರರು ಉಪಸ್ಥಿತರಿದ್ದರು