ಜ.6ರಂದು ಎಸ್‌ಸಿಡಿಸಿಸಿ ಬ್ಯಾಂಕ್ ಕಲ್ಲಡ್ಕ ಶಾಖೆಯ ಸ್ಥಳಾಂತರ

ಮಂಗಳೂರು

news-details

ಗ್ರಾಹಕರ ಸೇವೆಯಲ್ಲಿ ಮುಂಚೂಣಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.,(ಎಸ್‌ ಸಿಡಿಸಿಸಿ ಬ್ಯಾಂಕ್ ) ಅತ್ಯಾಧುನಿಕ ಬ್ಯಾಂಕಿಂಗ್ ಸೇವೆಗಳನ್ನು ಗ್ರಾಹಕರಿಗೆ ನೀಡುತ್ತಾ ಬರುತ್ತಿದೆ. ಇದೀಗ ಗ್ರಾಹಕರ ಹೆಚ್ಚಿನ ಅನುಕೂಲಕ್ಕಾಗಿ ಬಂಟ್ವಾಳ ತಾಲೂಕಿನ ಕಲ್ಲಡ್ಕ ಶಾಖೆಯು ಈಗ ಇರುವ ಕಟ್ಟಡದಿಂದ ಕಲ್ಲಡ್ಕ ಮುಖ್ಯರಸ್ತೆಯಲ್ಲಿರುವ ' ಕಾವೇರಿ ಸಂಕೀರ್ಣ "ದ ನೆಲ ಅಂತಸ್ತು ಕಟ್ಟಡಕ್ಕೆ ದಿನಾಂಕ 6-1-2025ರಂದು ಸೋಮವಾರ ಪೂರ್ವಾಹ್ನ 11.00 ಗಂಟೆಗೆ ಸ್ಥಳಾಂತರಗೊಳ್ಳಲಿದೆ.

ಸ್ಥಳಾಂತರಗೊಳ್ಳುವ ಈ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಬ್ಯಾಂಕಿನ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ಇದರ ಅಧ್ಯಕ್ಷರಾದ ಸಹಕಾರ ರತ್ನ
ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ದೀಪ ಪ್ರಜ್ವಲನೆ ಮಾಡಲಿರುವರು. ಸಮಾರಂಭದಲ್ಲಿ ಶಾಖಾ ಕಟ್ಟಡದ ಮಾಲಕರಾದ ಶ್ರೀ ವರದರಾಯ ಪ್ರಭು ಇವರು ಗೌರವ ಉಪಸ್ಥಿತಿ ಇರುವರು.

ಈ ಶಾಖೆಯು ಸಂಪೂರ್ಣ ಗಣಕೀಕೃತಗೊಂಡು, ಏಕಗವಾಕ್ಷಿ, ಕೋರ್ ಬ್ಯಾಂಕಿಂಗ್ ಹಾಗೂ ಆರ್‌ಟಿಜಿಎಸ್ ಮತ್ತು ನೆಫ್ಟ್ ಸೌಲಭ್ಯಗಳೊಂದಿಗೆ ಕಾರ್ಯಾರಂಭಗೊಳ್ಳಲಿದೆ ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ.

news-details