ನೆಟ್ಟಣಿಗೆ ಮುಡ್ನೂರು ಸರಕಾರಿ ಪ್ರೌಢಶಾಲೆ ಯ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಾರ್ಷಿಕೋತ್ಸವ ವು ಶನಿವಾರ ನಡೆಯಿತು.
ಪುತ್ತೂರು ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಹೇಮನಾಥ ಶೆಟ್ಟಿ ಕಾವು ಮಾತನಾಡಿ ಅಭಿವೃದ್ಧಿ ಹೊಂದುತ್ತಿರುವ ಈ ಶಾಲೆಗೆ ಇನ್ನಷ್ಟು ಮೂಲಸೌಕರ್ಯಗಳ ಅವಶ್ಯಕತೆ ಇದ್ದು ಮುಖ್ಯವಾಗಿ ಪದವಿ ಪೂರ್ವ ಮತ್ತು ಪದವಿ ಶಿಕ್ಷಣ ಈ ಪ್ರದೇಶಕ್ಕೆ ಅತಿ ಅಗತ್ಯವಾಗಿ ಬೇಕಾಗಿರುತ್ತದೆ. ಈ ಪ್ರದೇಶದ ಅಭಿವೃದ್ಧಿಗೆ ಸಂಪೂರ್ಣ ಸಹಕಾರವನ್ನು ನೀಡುತ್ತೇನೆ ಎಂದರು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಫೌಝಿಯಾ ಇಬ್ರಾಹಿಂ ಮಾತನಾಡಿ ಪಠ್ಯ ಮತ್ತುಸಹಪಠ್ಯಗಳಿಗೆ ವಿಶೇಷವಾದ ಆಸಕ್ತಿಯನ್ನು ತೋರಿಸುತ್ತಿರುವ ಈ ವಿದ್ಯಾ ಸಂಸ್ಥೆ ಇನ್ನೂ ಉತ್ತುಂಗಕ್ಕೆ ಏರಲಿ ಎಂದು ಶುಭ ಹಾರೈಸಿದರು. ಸಭಾಧ್ಯಕ್ಷತೆಯನ್ನು ವಹಿಸಿದ ಶಾಲಾ ಕಾರ್ಯಾಧ್ಯಕ್ಷರಾದ ಶ್ರೀರಾಮ್ ಪಕ್ಕಳ ಕರ್ನೂರು ಗುತ್ತು ಇವರು ಮಾತನಾಡಿ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು ಹಾಗೂ ಪೋಷಕರ ಸಹಕಾರದಿಂದ ಶಾಲಾ ಅಭಿವೃದ್ಧಿ ಸಮಿತಿಗೆ ಉತ್ತಮ ಕೆಲಸ ಮಾಡಲು ಸಾಧ್ಯವಾಗಿದೆ. ಉತ್ತಮವಾದ ಶಾಲಾ ಅಭಿವೃದ್ಧಿ ಸಮಿತಿಯು ನನ್ನ ಜೊತೆ ಇರುವುದರಿಂದ ಇನ್ನಷ್ಟು ಅಭಿವೃದ್ಧಿಯನ್ನು ಮಾಡಲು ಬದ್ಧರಿದ್ದೇವೆ ಎಂದರು.
ಸಭಾಧ್ಯಕ್ಷತೆಯನ್ನು ವಹಿಸಿದ ಶಾಲಾ ಕಾರ್ಯಾಧ್ಯಕ್ಷರಾದ ಶ್ರೀರಾಮ್ ಪಕ್ಕಳ ಕರ್ನೂರು ಗುತ್ತು ಇವರು ಮಾತನಾಡಿ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು ಹಾಗೂ ಪೋಷಕರ ಸಹಕಾರದಿಂದ ಶಾಲಾ ಅಭಿವೃದ್ಧಿ ಸಮಿತಿಗೆ ಉತ್ತಮ ಕೆಲಸ ಮಾಡಲು ಸಾಧ್ಯವಾಗಿದೆ. ಉತ್ತಮವಾದ ಶಾಲಾ ಅಭಿವೃದ್ಧಿ ಸಮಿತಿಯು ನನ್ನ ಜೊತೆ ಇರುವುದರಿಂದ ಇನ್ನಷ್ಟು ಅಭಿವೃದ್ಧಿಯನ್ನು ಮಾಡಲು ಬದ್ಧರಿದ್ದೇವೆ ಎಂದರು.ಶಾಲಾ ವಾರ್ಷಿಕೋತ್ಸದ ಧ್ವಜಾರೋಹಣ ಕಾರ್ಯಕ್ರಮವನ್ನು ಉದ್ಯಮಿ ರಿನಿತ್ ರೈ ಕರ್ನೂರು ನೆರವೇರಿಸಿದರು.ಶಾಲಾ ಮುಖ್ಯ ಶಿಕ್ಷಕ ಪ್ರೇಮ್ ಕುಮಾರ್ ವರದಿ ವಾಚಿಸಿದರು.ಸಾಧಕ ವಿದ್ಯಾರ್ಥಿಗಳ ಪಟ್ಟಿಯನ್ನು ಶಿಕ್ಷಕಿಯರಾದ ದಮಯಂತಿ, ಮೋನಿಷಾ, ಮಾಲಿನಿ, ಮೀನಾಕ್ಷಿ ವಾಚಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾಮ ಮೇನಾಲ, ಸದಸ್ಯರಾದ ವೆಂಕಪ್ಪ ನಾಯ್ಕ, ಇಬ್ರಾಹಿಂ ಪಳ್ಳತ್ತೂರು, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ಸದಾಶಿವ ರೈ ನಡುಬೈಲು, ಸೂಫಿ ಬಾಂಟಡ್ಕ, ಮಹಾಬಲ ರೈ ಕರ್ನೂರು. ಮೊಹಮ್ಮದ್ ಪಳ್ಳತ್ತೂರು, ಫೌಝಿಯಾ, ದೇವಕಿ, ನಾರಾಯಣ್ ನಾಯ್ಕ. ಶಶಿಕಲಾ ಮಾಧವ ಅಡ್ಡ oತಡ್ಕ. ಹಿರಿಯ ವಿದ್ಯಾರ್ಥಿಸಂಘದ ಅಧ್ಯಕ್ಷ ಮಿಥುನ್ ರಾಜ್, ಶಾರದಾ,ಕಚೇರಿ ಸಿಬ್ಬಂದಿ ಹೇಮಾವತಿ,ಉಷಾ ವೆಂಕಟರಮಣ, ಲಕ್ಷ್ಮಿ ಕಲ್ಲಾಜೆ,ಮಾಧವ ಗೌಡ, ಕೊರಗಪ್ಪ ಕಲ್ಲಾಜೆ, ವಿಶಾಲಾಕ್ಷಿ, ಜಯಂತಿ ರತ್ನಾವತಿ ಉಪಸ್ಥಿತರಿದ್ದರು.
ಶಿಕ್ಷಕಿ ಶ್ರೀಮತಿ ಇಂದಿರಾ ಸ್ವಾಗತಿಸಿದರು. ಶಿಕ್ಷಕ ಪುರುಷೋತ್ತಮ ಬಿ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ದೇವಿಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು