ರಾಜ್ಯದ ಗ್ರಾಮೀಣ ಪತ್ರಕರ್ತರಿಗೂ ಉಚಿತ ಸಾರಿಗೆ ಬಸ್ ಪಾಸ್ ವಿತರಣೆಮಾಡುವುದಾಗಿ ಬಜೆಟ್ ನಲ್ಲಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದರು. ಆ ಬಳಿಕ ಆದೇಶ ಕೂಡ ಮಾಡಲಾಗಿತ್ತು. ಇದೀಗ ಉಚಿತ ಬಸ್ ಪಾಸ್ ವಿತರಿಸಲು ಆಯ್ಕೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ.ಆಯ್ಕೆ ಸಮಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಆಯ್ಕೆಯಾಗಿದ್ದಾರೆ.
ಇಂದು ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2024-25ನೇ ಸಾಲಿನ ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ವೃತ್ತಿಗ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ನೀಡುವ ಯೋಜನೆಯನ್ನು ಕೆಲವೊಂದು ಮಾರ್ಗಸೂಚಿ, ಷರತ್ತುಗಳಿಗೆ ಒಳಪಡಿಸಿ ಅನುಷ್ಠಾಗೊಳಿ, ಆದೇಶಿಸಲಾಗಿತ್ತು ಎಂದಿದ್ದಾರೆ.
ಇದರ ಅನ್ವಯ ಅರ್ಜಿಗಳನ್ನು ಪರಿಶೀಲಿಸಿ ಈ ಸೌಲಭ್ಯವನ್ನು ಮಂಜೂರು ಮಾಡಲು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಇನ್ನಿತರ ಸದಸ್ಯರನ್ನೊಳಗೊಂಡಂತೆ ಆಯ್ಕೆ ಸಮಿತಿಯನ್ನು ರಚಿಸಲಾಗಿರುತ್ತದೆ ಎಂದಿದ್ದಾರೆ.
ದಿನಾಂಕ 01-12-2024ರಿಂದ ಜಾರಿಗೆ ಬರುವಂತೆ 2 ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಆಯ್ಕೆ ಸಮಿತಿಯನ್ನು ರಚಿಸಿ ಸರ್ಕಾರದ ಆದೇಶ ಹೊರಡಿಸುವಂತೆ ಸಂಭಾವ್ಯ ಗಣ್ಯರ ಪಟ್ಟಿಯೊಂದಿಗೆ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಇವರು ಕೋರಿರುತ್ತಾರೆ ಎಂದಿದ್ದಾರೆ.
ಈ ಹಿನ್ನಲೆಯಲ್ಲಿ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ನೀಡುವ ಯೋಜನೆಯ ಸೌಲಭ್ಯವನ್ನು ಮಂಜೂರು ಮಾಡಲು ಈ ಕೆಳಕಂಡ ಆಯ್ಕೆ ಸಮಿತಿಯನ್ನು ರಚಿಸಿರುವುದಾಗಿ ಹೇಳಿದ್ದಾರೆ.
ಆಯುಕ್ತರು, ಇಲಾಖಾ ಮುಖ್ಯಸ್ಥರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ - ಅಧ್ಯಕ್ಷರು
ಜಂಟಿ ನಿರ್ದೇಶಕರು ( ಸುದ್ದಿ ಮತ್ತು ಪತ್ರಿಕಾ ಶಾಖೆ) ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ- ಸದಸ್ಯರು
ಸರ್ಕಾರದಿಂದ ನಾಮ ನಿರ್ದೇಶಿತರಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಓರ್ವ ಪ್ರತಿನಿಧಿ - ಸದಸ್ಯರು, ಶಿವಾನಂದ ತಗಡೂರು, ಹಿರಿಯ ಪತ್ರಕರ್ತರು
ಸರ್ಕಾರದಿಂದ ನಾಮ ನಿರ್ದೇಶಿತರಾದ ಬೆಂಗಳೂರು ವರದಿಗಾರರ ಕೂಟದ ಓರ್ವ ಪ್ರತಿನಿಧಿ- ಸದಸ್ಯರು, ಎಂ ಚಂದ್ರಶೇಖರ್, ಹವ್ಯಾಸಿ ಪತ್ರಕರ್ತರು
ಸರ್ಕಾರದಿಂದ ನಾಮ ನಿರ್ದೇಶಿತರಾದ ಕರ್ನಾಟಕ ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘ (ರಿ) ಚಿತ್ರದುರ್ಗದ ಓರ್ವ ಪ್ರತಿನಿಧಿ - ಸದಸ್ಯರು, ಹೆಚ್.ಎಲ್ ಸುರೇಶ್, ಸಂಪಾದಕರು, ವಾಸ್ತವ ಕರ್ನಾಟಕ ದಿನಪತ್ರಿಕೆ.
ಸರ್ಕಾರದಿಂದ ನಾಮ ನಿರ್ದೇಶಿತರಾದ ಬೆಂಗಳೂರು ಪೋಟೋ ಜರ್ನಲಿಸ್ಟ್ ಸಂಘದ ಓರ್ವ ಪ್ರತಿನಿಧಿ- ಸದಸ್ಯರು, ಮೋಹನ್ ಕುಮಾರ್, ಹಿರಿಯ ಪತ್ರಿಕಾ ಛಾಯಾಗ್ರಾಹಕರು.
ವಿಶೇಷ ಆಮಂತ್ರಿತರು ( ಇಲಾಖಾ ಮುಖ್ಯಸ್ಥರ ವಿವೇಚನಾಧಿಕಾರ) ಇಬ್ಬರು ಪ್ರತಿನಿಧಿಗಳು - ಸದಸ್ಯರು - ಗಂಗಾಧರ್ ಬಂಡಿಹಾಳ್, ಸ್ಥಾನಿಕ ಸಂಪಾದಕರು, ವಿಜಯ ಕರ್ನಾಟಕ, ಶ್ರೀನಿವಾಸ ನಾಯಕ್ ಮಂಗಳೂರು
ಉಪ ನಿರ್ದೇಶಕರು, ಸುದ್ದಿ ಮತ್ತು ಪತ್ರಿಕಾ ಶಾಖೆ- ಸದಸ್ಯ ಕಾರ್ಯದರ್ಶಿ