ಸಹಕಾರಿ ರಂಗದಲ್ಲಿ ಕ್ರೀಯಾಶೀಲರಾಗಿದ್ದ ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಶ್ರೀ ಕೆ. ಹರಿಶ್ಚಂದ್ರ ಅವರು ಸರಳ ಸಜ್ಜನ ಸಹಕಾರಿ ಆಗಿದ್ದರು. ಸಹಕಾರಿ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ತನ್ನನ್ನು ತೊಡಗಿಸಿಕೊಂಡಿದ್ದರು. ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದ ಇವರು ಸಂಘದ ಅಭಿವೃದ್ಧಿಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿದ್ದರು. ಮುಂದೆ ಇದೇ ಸಂಘವನ್ನು ಸುಮಾರು ಹತ್ತು ವರ್ಷಗಳಿಂದ ಅಧ್ಯಕ್ಷರಾಗಿ ಮುನ್ನಡೆಸಿ ಜನಾನುರಾಗಿಯಾಗಿದ್ದರು. ಎಸ್ ಸಿಡಿಸಿಸಿ ಬ್ಯಾಂಕಿನಲ್ಲಿ ಕಳೆದ ಆರು ವರ್ಷಗಳಿಂದ ನಿರ್ದೇಶಕರಾಗಿ ಸ್ನೇಹಮಯಿಯಾಗಿದ್ದ ಇವರ ನಿಧನಕ್ಕೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಬೆಂಗಳೂರು ಹಾಗೂ ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ ಎಂ ಎನ್ ರಾಜೇಂದ್ರ ಕುಮಾರ್ ಸಂತಾಪ ಸೂಚಿಸಿದ್ದಾರೆ
ನಿರ್ದೇಶಕರ ಸಂತಾಪ : ಹರಿಶ್ಚಂದ್ರ ಅವರ ನಿಧನಕ್ಕೆ ಎಸ್ ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಟಿ.ಜಿ.ರಾಜರಾಮ ಭಟ್, ಭಾಸ್ಕರ್ ಎಸ್ ಕೋಟ್ಯಾನ್, ಎಂ.ವಾದಿರಾಜ ಶೆಟ್ಟಿ ಶಶಿಕುಮಾರ್ ರೈ ಬಾಲ್ಯೋಟ್ಟು, ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಎಸ್. ಬಿ. ಜಯರಾಮ್ ರೈ, ಎಂ.ಮಹೇಶ್ ಹೆಗ್ಡೆ, ರಾಜುಪೂಜಾರಿ, ಬಿ ಅಶೋಕ್ ಕುಮಾರ್ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ.ಜೈರಾಜ್ ಬಿ ರೈ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಕುಶಾಲಪ್ಪ ಗೌಡ, ಎಸ್. ಎನ್. ಮನ್ಮಥ, ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್. ಎನ್., ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಇವರು ಸಂತಾಪ ಸೂಚಿಸಿದ್ದಾರೆ.