ರಾಜ್ಯ ಬಜೆಟ್ ನಲ್ಲಿ ಕರಾವಳಿ ಭಾಗದ ಸಂಪೂರ್ಣ ಕಡೆಗಣನೆ-ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು

news-details

ಮಂಗಳೂರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ನಲ್ಲಿ ಕರಾವಳಿ ಭಾಗದ ಅಭಿವೃದ್ಧಿಗೆ ಯಾವುದೇ ಯೋಜನೆ ಘೋಷಣೆ ಮಾಡದೆ ಸಂಪೂರ್ಣ ನಿರ್ಲಕ್ಷ ಮಾಡಲಾಗಿದೆ ಎಂದು ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಹಾಗೂ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.

ಮಂಗಳೂರುನಲ್ಲಿ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ಇದು ಅಲ್ಪಸಂಖ್ಯಾತರ ಓಲೈಕೆ ಮಾಡುವ ಬಜೆಟ್ ಆಗಿದೆ. ಬಹುಸಂಖ್ಯಾತರನ್ನು ಕಡೆಗಣಿಸಲಾಗಿದೆ. ಹಿಂದುಳಿದ ವರ್ಗ, ಪರಿಶಿಷ್ಟ್ಟ ವರ್ಗ ಹಾಗೂ ಪರಿಶಿಷ್ಟ್ಟ ಜಾತಿಗಳನ್ನು ಕಡೆಗಣಿಸಲಾಗಿದೆ. ರೈತರಿಗೆ ಹಾಗೂ ಜನ ಸಾಮಾನ್ಯರ ವಿರೋಧಿ ಬಜೆಟ್ ಇದಾಗಿದೆ. ಉದ್ಯೋಗ ಸ್ರಷ್ಟಿ ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕೈಗಾರಿಕಾ ವಲಯವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದರು.

news-details