ಮಂಗಳೂರು ವಿವಿ : ಡಾ. ಎಂ. ಎನ್. ರಾಜೇಂದ್ರ ಕುಮಾರ್, ರೋಹನ್ ಮೊಂತೆರೋ, ಕನ್ಯಾನ ಸದಾಶಿವ ಶೆಟ್ಟಿಗೆ ಗೌರವ ಡಾಕ್ಟರೇಟ್

ಮಂಗಳೂರು

news-details

ವಿಶ್ವ ವಿದ್ಯಾನಿಲಯದ 43ನೇ ವಾರ್ಷಿಕ ಘಟಿಕೋತ್ಸವ ಮಾ.29ರಂದು ಬೆಳಗ್ಗೆ ಪೂರ್ವಾಹ್ನ 11ಕ್ಕೆ ವಿಶ್ವವಿದ್ಯಾನಿಲಯ ಆವರಣದ ಮಂಗಳ ಸಭಾಂಗಣದಲ್ಲಿ ನಡೆಯಲಿದೆ. ಘಟಿಕೋತ್ಸವದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್,ರೋಹನ್ ಕಾರ್ಪೊರೇಷನ್ ಮುಖ್ಯಸ್ಥ ರೋಹನ್ ಮೊಂತೆರೊ, ಮುಂಬೈಯ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿಗೆ ಗೌರವ ಡಾಕ್ಟರೇಟ್ ಪ್ರದಾನ ನಡೆಯಲಿದೆ ಎಂದು ವಿವಿ ಕುಲಪತಿ ಪ್ರೊ. ಪಿ.ಎಲ್ ಧರ್ಮ ತಿಳಿಸಿದ್ದಾರೆ.

ಕೊಣಾಜೆಯ ಮಂಗಳೂರು ವಿವಿಯ ಆಡಳಿತ ಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಭಾರತೀಯ ವಿಶ್ವವಿದ್ಯನಿಲಯಗಳ ಸಂಘದ ಉಪಾಧ್ಯಕ್ಷ ಮತ್ತು ಸೋಮಿಯಾ ವಿದ್ಯಾವಿಹಾರ್ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿ.ಎನ್. ರಾಜಶೇಖರನ್ ಪಿಳ್ಳೈ ಮುಖ್ಯ ಅತಿಥಿಯಾಗಿ ಭಾಷಣ ಮಾಡಲಿರುವರು. ಕರ್ನಾಟಕದ ರಾಜ್ಯಪಾಲ ಹಾಗೂ ವಿವಿ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಪದವಿ ಪ್ರದಾನ ಮಾಡಲಿರುವರು. ಉನ್ನತ ಶಿಕ್ಷಣ ಸಚಿವ ಹಾಗೂ ಸಹಕುಲಾಧಿಪತಿ ಡಾ. ಎಂ.ಸಿ. ಸುಧಾಕರ್ ಉಪಸ್ಥಿತರಿರುವರು ಎಂದರು.

news-details