ಎಸ್‌ಸಿಡಿಸಿಸಿ ಬ್ಯಾಂಕ್ ರೂ. 110.40ಕೋಟಿ ಲಾಭಗಳಿಕೆ ಬ್ಯಾಂಕ್ ಇತಿಹಾಸದಲ್ಲಿಯೇ ಸರ್ವಕಾಲಿಕ ದಾಖಲೆ ಬ್ಯಾಂಕ್ ಡಾ. ಎಂ ಎನ್ ರಾಜೇಂದ್ರ ಕುಮಾರ್

ಮಂಗಳೂರು

news-details

ಮಂಗಳೂರು,ಎ.2;ಎಸ್‌ಸಿಡಿಸಿಸಿ ಬ್ಯಾಂಕ್‌ನ2025ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ರೂ. 110.40 ಕೋಟಿ ಲಾಭ ಗಳಿಸಿದೆ.ಇದು ಎಸ್‌ಸಿಡಿಸಿಸಿ ಬ್ಯಾಂಕ್‌ನ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯ ಮಿತದ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಅವರು ಬುಧವಾರ ಬ್ಯಾಂಕಿನ ಸಭಾಂಗಣದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ,
ಬ್ಯಾಂಕಿಂಗ್ ಸೇವೆಯಲ್ಲಿ ದೇಶಕ್ಕೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಅಭಿವೃದ್ಧಿಯ ಮುಂಚೂಣಿಯಲ್ಲಿದೆ. ಸಹಕಾರಿ ರಂಗದಲ್ಲಿ ವಿಶಿಷ್ಟ ಹಾಗೂ ವಿನೂತನ ಬ್ಯಾಂಕಿಂಗ್ ಸೇವೆಯನ್ನು ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ವಿಶಿಷ್ಟ ಹಾಗೂ ವಿನೂತನ ಬ್ಯಾಂಕಿಂಗ್ ಸೇವೆಯನ್ನು ತನ್ನ 113 ಶಾಖೆಗಳ ಮೂಲಕ ನೀಡುತ್ತಿರುವ ಎಸ್‌ ಸಿಡಿಸಿಸಿ ಬ್ಯಾಂಕ್ ಜನಸಾಮಾನ್ಯರ ಬ್ಯಾಂಕ್ ಆಗಿ ಗುರುತಿಸಿಕೊಂಡಿದೆ.
111 ವರ್ಷಗಳ ಸಾರ್ಥಕ ಸೇವೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನೀಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವರದಿ ವರ್ಷದಲ್ಲಿ ಅಮೋಘ ಸಾಧನೆಗೈದು,ಕಳೆದ ವರ್ಷ ಕ್ಕಿಂತ ಈ ಬಾರಿ ಲಾಭಾಂಶ ಶೇ 39.59 ಏರಿಕೆ ಯಾಗಿದೆ (ರೂ.79.09). ಎಸ್‌ಸಿಡಿಸಿಸಿ ಬ್ಯಾಂಕ್‌ನ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯಾಗಿದೆ ಹಾಗೂ ಬ್ಯಾಂಕಿನ ಅನುತ್ಪಾದಕ ಆಸ್ತಿಯ ಪ್ರಮಾಣವು 3.52 ಶೇಕಡಾ ದಿಂದ 2.71 ಶೇಕಡಾಕ್ಕೆ ಇಳಿಕೆಯಾಗಿರುವುದು ಒಂದು ಗಮನಾರ್ಹ ಸಾಧನೆಯಾಗಿದೆ ಎಂದು ಡಾ. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಆಧುನಿಕ ಬ್ಯಾಂಕಿಂಗ್ ಸೌಲಭ್ಯಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಗ್ರಾಹಕರನ್ನು ಹೆಚ್ಚು ಆಕರ್ಷಿಸುತ್ತಿದೆ. ವರದಿ ವರ್ಷದಲ್ಲಿ ರೂ.17366.68 ಕೋಟಿ ರೂಪಾಯಿಗಳ ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ. ಕಳೆದ ಸಾಲಿನ ಒಟ್ಟು ವ್ಯವಹಾರ (ರೂ.15544.34) ಈ ಬಾರಿ ಶೇ 11.72 ಏರಿಕೆ ಕಂಡಿದೆ. 2025-26ನೆ ಸಾಲಿನಲ್ಲಿ ಬ್ಯಾಂಕ್
ರೂ.19250.00 ಕೋಟಿ ವ್ಯವಹಾರದ ಗುರಿಯನ್ನು ಬ್ಯಾಂಕ್ ಹೊಂದಿದೆ.
*ರೂ. 7882.76 ಕೋಟಿ ಠೇವಣಿ:-
ಠೇವಣಿಗಳ ಸಂಗ್ರಹಣೆಯಲ್ಲಿ ಎಲ್ಲಾ ಬ್ಯಾಂಕ್‌ಗಳಲ್ಲೂ ಸ್ಪರ್ಧೆ ಇದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಯಾವುದೇ ಠೇವಣಾತಿ ಇಲ್ಲದೆಯೂ ಎಸ್‌ಸಿಡಿಸಿಸಿ ಬ್ಯಾಂಕ್ ತನ್ನ 113 ಶಾಖೆಗಳ ಮುಖಾಂತರ ಒಟ್ಟು ರೂ. 7882.76 ಕೋಟಿ ರೂಪಾಯಿ ಠೇವಣಿ ಸಂಗ್ರಹಿಸಿ ಸಾಧನೆಗೈದಿದೆ.ಮೂಲಕ ಠೇವಣಿ ಸಂಗ್ರಹಣೆಯಲ್ಲಿ ರಾಜ್ಯದ ಇತರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಸಾಲಿನ ಠೇವಣಿ ಸಂಗ್ರಹಣೆಗಿಂತ ಈ ಬಾರಿ ಶೇ.9.11 ಏರಿಕೆಯಾಗಿದೆ.
*ರೂ.7775.44 ಕೋಟಿ ಮುಂಗಡ:-
ಸ್ಪರ್ಧಾತ್ಮಕ ವ್ಯವಹಾರದಲ್ಲಿ ಬ್ಯಾಂಕ್ ರೂ.7775.44 ಕೋಟಿ ಮುಂಗಡ ನೀಡಿದೆ. ಕೃಷಿ ಹಾಗೂ ಕೃಷಿ ಅಭಿವೃದ್ಧಿಗೆ ಅಲ್ಪಾವಧಿ ಸಾಲವಾಗಿ ರೂ.2130.95 ಕೋಟಿ ರೂಪಾಯಿ. ಮಧ್ಯಮಾವಧಿ ಸಾಲ ರೂ.169.79 ಕೋಟಿ ರೂಪಾಯಿ, ಹೀಗೆ ಕೃಷಿ ಕ್ಷೇತ್ರಕ್ಕೆ ಒಟ್ಟು ರೂ.2300.74 ಕೋಟಿ ರೂಪಾಯಿ ಸಾಲ ನೀಡಲಾಗಿದ್ದು, ಕೃಷಿಯೇತರ ಕ್ಷೇತ್ರಕ್ಕೆ ರೂ.5474.70 ಕೋಟಿ ಸಾಲ ನೀಡಲಾಗಿದೆ.
*ಸತತ 30 ವರ್ಷಗಳಿಂದ ಕೃಷಿ ಸಾಲ ಮರುಪಾವತಿಯಲ್ಲಿ ಶೇಕಡಾ 100ರ ಸಾಧನೆ
ಬ್ಯಾಂಕ್ ವರದಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ.
*ಬ್ಯಾಂಕ್‌ಗೆ ಒಟ್ಟು 1086 ಸಂಘಗಳು ಸದಸ್ಯರಾಗಿವೆ. ಇವುಗಳ ಪಾಲು ಬಂಡವಾಳ ರೂ.476.00 ಕೋಟಿ ಆಗಿರುತ್ತದೆ. ದುಡಿಯುವ ಬಂಡವಾಳ ರೂ. 12873.14 ಕೋಟಿ ಆಗಿದ್ದು. ಇದು ಕಳೆದ ವರ್ಷಕ್ಕಿಂತ (ರೂ.11418.68 ಕೋಟಿ) ಶೇಕಡ 12.74 ರಷ್ಟು ಏರಿಕೆ ಕಂಡಿದೆ. ಬ್ಯಾಂಕ್ ರೂ.270.15 ಕೋಟಿ ವಿವಿಧ ನಿಧಿಗಳನ್ನು ಹೊಂದಿರುತ್ತದೆ. ಶೇಕಡ 8.02 ರಷ್ಟು ಏರಿಕೆ ಕಂಡಿದೆ.
*"ರುಪೇ" (RuPay) ಕಿಸಾನ್ ಕ್ರೆಡಿಟ್ ಕಾರ್ಡ್
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಮಂಗಳ ಕಿಸಾನ್ ಕ್ರೆಡಿಟ್ ಕಾರ್ಡ್ ಖಾತೆಯನ್ನು ಹೊಂದಿರುವ ರೈತರಿಗೆ ಬ್ಯಾಂಕ್ ರುಪೇ (RuPay) ಕಿಸಾನ್ ಕಾರ್ಡ್‌ ನ್ನು ನೀಡಿದೆ. ಈಗಾಗಲೇ 1,41,266 ರುಪೇ ಕಿಸಾನ್ ಕ್ರೆಡಿಟ್ ಕಾರ್ಡ್ ಗಳನ್ನು ,86,887 ರುಪೇ ಡೆಬಿಟ್ ಕಾರ್ಡ್ ಗಳನ್ನು ನೀಡಿದೆ.ಕಾರ್ಡ್‌ಗಳನ್ನು ರೈತರಿಗೆ ವಿತರಿಸಲಾಗಿದೆ. 86,887 ರುಪೇ ಡೆಬಿಟ್ ಕಾರ್ಡ್‌ಗಳನ್ನು ಬ್ಯಾಂಕ್‌ನ ಇತರ ಗ್ರಾಹಕರಿಗೆ ನೀಡಲಾಗಿದೆ ಎಂದವರು ತಿಳಿಸಿದ್ದಾರೆ.
*ಮುಂದಿನ ಯೋಜನೆಗಳು-ಇಂಟರ್ ಬ್ಯಾಂಕ್ ಮೊಬೈಲ್ ಪೇಮೆಂಟ್ ಸಿಸ್ಟಮ್ ಯೋಜನೆ: IMPS (Inter Bank Mobile
Payment System) ಯೋಜನೆಯನ್ನು ಕಾರ್ಯಗತಗೊಳಿಸಲು ರೂಪುರೇಷೆ ಸಿದ್ಧಪಡಿಸಲಾಗಿದೆ.ಈ ಯೋಜನೆಯಿಂದ ಗ್ರಾಹಕರು ಮೊಬೈಲ್ ಮುಖಾಂತರ ತಮ್ಮ ಖಾತೆಯಿಂದ ಇತರಬ್ಯಾಂಕಿನ ಖಾತೆಗೆ ಹಣ ವರ್ಗಾಯಿಸಬಹುದು.ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (Unilied Payments Interface - UPI) : ಇದು
ಜನಸಾಮಾನ್ಯರು ಉಪಯೋಗಿಸುವ ಯುಪಿಐ ಪಾವತಿ ವಿಧಾನವಾಗಿದೆ. ಈ ವಿಧಾನದಲ್ಲಿ ಸ್ಮಾರ್ಟ್‌ ಫೋನ್‌ನ್ನು ವರ್ಚುವಲ್ ಡೆಬಿಟ್ ಕಾರ್ಡ್‌ನಂತೆ ಬಳಸಬಹುದು. ಇದರಿಂದ ತ್ವರಿತವಾಗಿ ಹಣವನ್ನು ಪಾವತಿಸಬಹುದು ಹಾಗೂ ಸ್ವೀಕರಿಸಬಹುದು. ಮಾತ್ರವಲ್ಲದೆ, ಯುಪಿಐ ಸೇವೆಗಳಾದ ಗೂಗಲ್ ಪೇ, ಫೋನ್ ಪೇ ಹಾಗೂ ಇತರ ಪಾವತಿ ವಿಧಾನವನ್ನು ಬಳಸಬಹುದು. ಅಲ್ಲದೆ, ವಿದ್ಯುತ್ ಬಿಲ್, ನೀರಿನ ಬಿಲ್ ಹಾಗೂ ಟೆಲಿಫೋನ್ ಬಿಲ್‌ಗಳನ್ನು ಪಾವತಿಸಲು ಅವಕಾಶವಿದೆ.
ಯುಪಿಐ ಚಾಲಿತ ಆ್ಯಪ್‌ಗಳೊಂದಿಗೆ QR Code ಸ್ಕ್ಯಾನ್ ಮಾಡುವ ಮೂಲಕ ವ್ಯಾಪಾರ ಕೇಂದ್ರಗಳಲ್ಲೂ ಈ ಮಾದರಿಯನ್ನು ಉಪಯೋಗಿಸಬಹುದು ಎಂದರು.
*10 ಹೊಸ ಶಾಖೆಗಳು: ಬ್ಯಾಂಕ್ ಮುಂದಿನ ಅವಧಿಯಲ್ಲಿ 10 ಹೊಸ ಶಾಖೆಗಳನ್ನು ತೆರೆಯುವ ಯೋಜನೆಯನ್ನು ಹಮ್ಮಿ ಕೊಂಡಿದೆ ಎಂದು ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
*ಬ್ಯಾಂಕಿನ ಸಾಧನೆ:- ಬ್ಯಾಂಕಿಗೆ 22 ಬಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ, 19 ಬಾರಿ ನಬಾರ್ಡ್ ಪ್ರಶಸ್ತಿ ದೊರೆತಿದೆ. ಎರಡು ಬಾರಿ "ಎಫ್‌ಸಿಬಿಎ" ರಾಷ್ಟ್ರೀಯ ಪ್ರಶಸ್ತಿ, ಎರಡು ಬಾರಿ ಪ್ರತಿಷ್ಠಿತ "ಬ್ಯಾಂಕ್ ಬ್ಲೂ ರಿಬ್ಬನ್ ಪ್ರಶಸ್ತಿ" ,ಕೇಂದ್ರ ಸರಕಾರದ ಮಹತ್ತರ ಯೋಜನೆಯಾದ "ಅಟಲ್ ಪಿಂಚಣಿ ಯೋಜನೆ"ಯಚಂದಾದಾರರನ್ನು ನೋಂದಾಯಿಸಿ, ಭಾರತ ಸರ್ಕಾರದ ಹಣಕಾಸು ಸಚಿವಾಲಯದಿಂದ 4 ಬಾರಿ ಪ್ರಶಸ್ತಿಗೆ ಪಾತ್ರವಾಗಿದೆ.
ಬ್ಯಾಂಕ್ ಸಿಬ್ಬಂದಿಗಳಿಗೆ ಪಿಂಚಣಿ ಯೋಜನೆಯನ್ನು ಕಾರ್ಯರೂಪಕ್ಕೆ ತಂದ ರಾಜ್ಯದ ಮೊದಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್.
* ಸ್ವ ಸಹಾಯ ಗುಂಪುಗಳ ಸಮರ್ಪಕ ಅನುಷ್ಠಾನದಲ್ಲಿ ಬ್ಯಾಂಕ್‌ಗೆ ರಾಜ್ಯದಲ್ಲೇ ಪ್ರಥಮ ಸ್ಥಾನ. ಬ್ಯಾಂಕ್ ಒಟ್ಟು 34,621 ಗುಂಪುಗಳನ್ನು ಹೊಂದಿದೆ.ನವೋದಯ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯೆಯರಿಗೆ ಸಮವಸ್ತ್ರ ವಿತರಣೆಯನ್ನು ಮಾಡಲಾಗಿದೆ.
*ಜಿಲ್ಲೆಯಲ್ಲಿ ಒಟ್ಟು 1,62,839 ರೈತರಿಗೆ ಮಂಗಳಾ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ವಿತರಿಸಲಾಗಿದೆ. 91,548 ಕಿಸಾನ್ ಕ್ರೆಡಿಟ್ ಕಾರ್ಡುದಾರರಿಗೆ ವೈಯುಕ್ತಿಕ ಅಪಘಾತ ವಿಮಾ ಸೌಲಭ್ಯವನ್ನು ಒದಗಿಸಲಾಗಿದೆ.
*ಬ್ಯಾಂಕಿನ ಎಲ್ಲಾ ಶಾಖೆಗಳು ಸಂಪೂರ್ಣ ಗಣಕೀಕೃತಗೊಂಡು ಏಕಗವಾಕ್ಷಿ. ಆರ್.ಟಿ.ಜಿ.ಎಸ್/ನೆಫ್ಟ್ ಹಾಗೂ ಕೋರ್ ಬ್ಯಾಂಕಿಂಗ್‌ನಂತಹ ಉತ್ಕೃಷ್ಟ ಸೇವೆಯನ್ನು ಗ್ರಾಹಕರಿಗೆ ನೀಡುತ್ತಿದೆ. ಬ್ಯಾಂಕಿನ 20 ಶಾಖೆಗಳು ಸಂಪೂರ್ಣ ಹವಾನಿಯಂತ್ರಿತವಾಗಿ ಕಾರ್ಯನಿರ್ವಹಿಸುತ್ತಿವೆ.
* ಬ್ಯಾಂಕ್ ಮಂಗಳೂರಿನ ಕೇಂದ್ರ ಕಛೇರಿಯಲ್ಲಿರುವ ಕೊಡಿಯಾಲ್‌ ಬೈಲ್ ಶಾಖೆ ಸೇರಿದಂತೆ ಪುತ್ತೂರು, ಉಪ್ಪಿನಂಗಡಿ, ಸವಣೂರು, ಬೆಳ್ತಂಗಡಿ ಹಾಗೂ ಸಿದ್ದಾಪುರಗಳಲ್ಲಿರುವ ಶಾಖೆಗಳು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ.
* ಗ್ರಾಹಕರ ಮನೆ ಬಾಗಿಲಿಗೆ ಬ್ಯಾಂಕ್ ಎನ್ನುವ ಆಶಯದೊಂದಿಗೆ ಸುಸಜ್ಜಿತ ವಾಹನದಲ್ಲಿ (Bank on Wheel) ಎಲ್ಲಾ ರೀತಿಯ ಬ್ಯಾಂಕಿಂಗ್ ಸೇವೆಯನ್ನು ಹಾಗೂ ಎ.ಟಿ.ಎಂ. ಸೌಲಭ್ಯವನ್ನು ಕಾರ್ಯರೂಪಕ್ಕೆ ತಂದ ದೇಶದ ಮೊದಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆಗಿದೆ. ಮಂಗಳೂರು ಹಾಗೂ ಉಡುಪಿಯಲ್ಲಿ ಮೊಬೈಲ್ ಬ್ಯಾಂಕಿಂಗ್" ವ್ಯವಸ್ಥೆಯು ಕಾರ್ಯರೂಪದಲ್ಲಿದೆ.
* ಬ್ಯಾಂಕಿನ ಎಲ್ಲಾ ಶಾಖೆಗಳ ಭದ್ರತೆಯ ಹಿತದೃಷ್ಟಿಯಿಂದ ಸಿಸಿಟಿವಿ ಕೆಮರಾ ಅಳವಡಿಸಲಾಗಿದೆ.
* ತರಬೇತಿ ಕೇಂದ್ರ: ಸಹಕಾರಿ ಕ್ಷೇತ್ರದಲ್ಲಿ ದುಡಿಯುತ್ತಿರುವವರಿಗೆ ಸಹಕಾರಿ ಕ್ಷೇತ್ರದ ಬಗ್ಗೆ ವಿಶೇಷ ಅನುಭವ ನೀಡಲು ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಸುಸಜ್ಜಿತ ತರಬೇತಿ ಕೇಂದ್ರವನ್ನು ಬ್ಯಾಂಕ್ ಹೊಂದಿದೆ.
*ಟ್ಯಾಬ್ ಬ್ಯಾಂಕಿಂಗ್: ಬ್ಯಾಂಕ್ ವ್ಯವಹಾರವನ್ನು ಸರಳೀಕರಿಸುವ ನಿಟ್ಟಿನಲ್ಲಿ ಟ್ಯಾಬ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಗ್ರಾಹಕರಿಗೆ ಬ್ಯಾಂಕ್ ಪರಿಚಯಿಸಿದೆ. ಮನೆ ಅಥವಾ ಕಛೇರಿಗಳಲ್ಲಿ ಕುಳಿತು ಮೊಬೈಲ್ ಸಂಪರ್ಕವಿರುವ ಬ್ಯಾಂಕಿನ ಟ್ಯಾಬ್ಲೆಟ್ ಬಳಸಿ ತಮ್ಮ ಬ್ಯಾಂಕ್ ಖಾತೆಯನ್ನು ತೆರೆದು ನಿರ್ವಹಿಸಲುಅನುಕೂಲಕರವಾಗಿದೆ.ಮೊಬೈಲ್ ಆ್ಯಪ್ ,15 ಶಾಖೆಗಳಲ್ಲಿ ಎಟಿಎಂ ಅಳವಡಿಕೆ ಮಾಡಲಾಗಿದೆ.
ಮೇ.10ರಂದು ಮಂಗಳೂರಿನಲ್ಲಿ ಸುಮಾರು ನವೋದಯ ಸ್ವ ಸಹಾಯ ಗುಂಪುಗಳ ಸದಸ್ಯರು ತಮ್ಮ ಸಮವಸ್ತ್ರ ದೊಂದಿಗೆ ಬೆಳ್ಳಿ ಹಬ್ಬದ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಡಾ.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ವಿನಯ ಕುಮಾರ್‌ ಸೂರಿಂಜೆ, ನಿರ್ದೇಶಕರಾದ ಭಾಸ್ಕರ್‌ ಎಸ್‌. ಕೋಟ್ಯಾನ್‌, ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್‌ ರೈ,ಎಸ್.ಬಿ. ಜಯರಾಮ ರೈ, ಜೈರಾಜ್‌ ಬಿ.ರೈ,ಸದಾಶಿವ ಉಳ್ಳಾಲ್ ,ಮೋನಪ್ಪ ಶೆಟ್ಟಿ ಎಕ್ಕಾರು, ವಾದಿರಾಜ ಶೆಟ್ಟಿ ಬ್ಯಾಂಕಿನ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.
ಬಾಕ್ಸ್ ಐಟಂ
ಮೇ 10 ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ಬ್ರಹತ್ ನವೋದಯ ಸಮಾವೇಶ ನಡೆಯಲಿದೆ. ನವೋದಯ ಸ್ವಸಹಾಯ ಗುಂಪುಗಳ 1.5 ಲಕ್ಷಕ್ಕೂ ಮಿಕ್ಕಿ ಮಹಿಳೆಯರು ಈ ಸಮಾವೇಶ ದಲ್ಲಿ ಭಾಗವಹಿಸಲಿದ್ದಾರೆ. ಒಂದೇ ರೀತಿಯ ಸಮವಸ್ತ್ರ ಧರಿಸಿ ಬರಲಿದ್ದಾರೆ.ದೇಶದಲ್ಲಿಯೇ ಮೊದಲ ಬಾರಿಗೆ ಈ ರೀತಿಯ ಕಾರ್ಯಕ್ರಮ ನಡೆಯಲಿದೆ. ಇದೂ ಕೂಡಾ ಒಂದು ಇತಿಹಾಸ ನಿರ್ಮಿಸಲಿದೆ ಎಂದು ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ತಿಳಿಸಿದರು.

news-details