ಪೇಜಾವರ ಮಠದ ವತಿಯಿಂದ ಡಾ. ಎಂ. ಎನ್. ರಾಜೇಂದ್ರಕುಮಾರ್ ಅವರಿಗೆ ಅಭಿನಂದನೆ

ಮಂಗಳೂರು

news-details

ಮಂಗಳೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿಯಿಂದ ಪುರಸ್ಕೃತರಾದ ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರನ್ನು ಉಡುಪಿ ಪೇಜಾವರ ಮಠದ ವತಿಯಿಂದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಭಾನುವಾರ ಆಶೀರ್ವಚಿಸಿ, ಅಭಿನಂದಿಸಿದರು.

ಶ್ರೀ ಪೇಜಾವರ ಅಧೋಕ್ಷಜ ಮಠ ಉಡುಪಿ, ಅಖಿಲ ಭಾರತ ಮಾಧ್ವ ಮಹಾಮಂಡಲ (ರಿ.) ಮತ್ತು ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ (ರಿ), ಬೆಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ, ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುತ್ತಿರುವ ಭಕ್ತಿ ಸಿದ್ಧಾಂತೋತ್ಸವ - ರಾಮೋತ್ಸವ ಧಾರ್ಮಿಕ ಸಮಾರಂಭದಲ್ಲಿ ಪೇಜಾವರ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಎಸ್ ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಉಪಸ್ಥಿತರಿದ್ದರು.

news-details