ಹನುಮಗಿರಿ :ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ

ಪುತ್ತೂರು

news-details

ಈಶ್ವರ ಮಂಗಲ :ಹನುಮಗಿರಿ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆ ಇಲ್ಲಿ ಏ.21 ರಿಂದ ಏ. 26 ರವರೆಗೆ ನಡೆಯುವ ಮಕ್ಕಳಿಗೆ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಸೋಮವಾರ ನಡೆಯಿತು.
ಸಂಸ್ಥೆಯ ಸಂಚಾಲಕರಾದ ಶಿವರಾಮ್ ಪಿ ಉದ್ಘಾಟಿಸಿ,ಅಧ್ಯಕ್ಷತೆ ವಹಿಸಿ ಮಾತನಾಡಿ ಪಠ್ಯಕ್ರಮ ಒಂದು ಭಾಗವಾದರೆ ನಮ್ಮ ಭೌತಿಕ, ಶಾರೀರಿಕ ವಿಚಾರಕ್ಕೂ ಹೆಚ್ಚಿನ ಪ್ರಾಮುಖ್ಯತೆಯನ್ನು ಕೊಡಬೇಕು. ಈ ದೃಷ್ಟಿಯಿಂದ ಶಿಬಿರವನ್ನು ಆಯೋಜಿಸಿದ್ದು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಶುಭ ಹಾರೈಸಿದರು.
ಸಂಸ್ಥೆಯ ಮುಖ್ಯ ಶಿಕ್ಷಕಿ ಸೌಮ್ಯ.ಎ ಪ್ರಾಸ್ತಾವಿಕ ನುಡಿಗಳನ್ನಾಡಿ ಶಿಬಿರದಲ್ಲಿ ನಡೆಯುವ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿ ಶಾರದಾ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಲತಾ ಡಿ ಕೆ ಉಪಸ್ಥಿತರಿದ್ದರು. ಶಿಕ್ಷಕಿಯರಾದ ಜಯಸ್ವಿನಿ ಸ್ವಾಗತಿಸಿದರು.ಗೀತಾ ವಂದಿಸಿದರು. ಶಿಕ್ಷಕಿಯರಾದ ಪ್ರಸೀದಾ, ರಾಜೇಶ್ವರಿರವರು ನಿರೂಪಿಸಿದರು.

news-details