ನವೋದಯ ಸ್ವ ಸಹಾಯ ಗುಂಪುಗಳ ಸಮಾವೇಶಕ್ಕೆ ಒಂದೂವರೆ ಲಕ್ಷಕ್ಕೂ ಅಧಿಕ ಪ್ರತಿನಿಧಿಗಳ ನಿರೀಕ್ಷೆ-ಡಾ.ಎಂ. ಎನ್. ರಾಜೇಂದ್ರ ಕುಮಾರ್.

ಮಂಗಳೂರು

news-details

ವೋದಯ ಸ್ವಸಹಾಯ ಗುಂಪುಗಳ ಸಮಾವೇಶ "ರಜತ ಸಂಭ್ರಮ” ಶನಿವಾರ ವಿಶೇಷ ಸಿಧ್ಧತೆ ಯೊಂದಿಗೆ ಮಾದರಿಯಾಗಿ ನಡೆಯಲಿದೆ ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ಮಂದಿ ಪ್ರತಿನಿಧಿ ಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಇದರ ಸಂಸ್ಥಾ ಪಕರಾದ ಡಾ| ಎಂ. ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಈ ಸಮಾವೇಶ ದೇಶಕ್ಕೆ ಮಾದರಿಯಾಗುವ ಸಮಾವೇಶ ಆಗಲಿದೆ. ಈ ಅರ್ಥಪೂರ್ಣ ರಜತ ಸಂಭ್ರಮವನ್ನು ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ನವೋದಯ ಸ್ವಸಹಾಯ ಗುಂಪುಗಳ ಸಮಾವೇಶ "ರಜತ ಸಂಭ್ರಮ” ನೆನಪಿಗಾಗಿ ವಿಶಿಷ್ಟ ರೀತಿಯ ಲಾಂಛನವನ್ನು ಕರ್ನಾಟಕದ ಮಾನ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಿಡುಗಡೆ ಗೊಳಿಸಲಿರುವರು ನವೋದಯ ರಜತ ಸಂಭ್ರಮದ ನವೋದಯ ಸ್ವ-ಸಹಾಯ ಗುಂಪುಗಳ ಸದಸ್ಯರುಗಳಿಗೆ ಸವಲತ್ತು ವಿತರಣೆಯನ್ನು ಮಹಾರಾಷ್ಟ್ರ ಸರಕಾರದ ಮಾನ್ಯ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇವರು ನೆರವೇರಿಸಲಿದ್ದು, ರಜತ ಸಂಭ್ರಮದ 'ಸಂತೃಪ್ತಿ' ಸ್ಮರಣ ಸಂಚಿಕೆಯ ಬಿಡುಗಡೆಯನ್ನು ಕರ್ನಾಟಕ ಸರಕಾರದ ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇವರು ನೆರವೇರಿಸಲಿರುವರು.
ರಜತ ಸಂಭ್ರಮ ಆಚರಣೆಯ ಸಂದರ್ಭ ಸಹಕಾರಿ ಧ್ವಜಾರೋಹಣವನ್ನು ಕರ್ನಾಟಕ ವಿಧಾನಸಭೆಯ ಮಾನ್ಯ ಸಭಾಧ್ಯಕ್ಷರು ಹಾಗೂ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕಯು.ಟಿ. ಖಾದರ್ ಫರೀದ್ ನೆರವೇರಿಸಲಿರುವರು. ಅತ್ಯುತ್ತಮ ನವೋದಯ ಗುಂಪುಗಳಿಗೆ ಪ್ರಶಸ್ತಿ ಪ್ರದಾನವನ್ನು ಕೇಂದ್ರ ಸರಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆಯ ಮಾನ್ಯ ಸಚಿವ ಪ್ರಲ್ಲಾದ್ ವಿ. ಜೋಶಿ ಇವರು ನೆರವೇರಿಸಲಿರುವರು.
ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ 'ನವೋದಯ 'ರಜತ ಸಂಭ್ರಮ' ಸಮಾರಂಭವನ್ನು ಆಯೋಜಿ ಸಲಾಗಿದ್ದು ಮೇ ತಿಂಗಳ 10ನೇ ತಾರೀಕು ಪೂರ್ವಾಹ್ನ 10.30ಗಂಟೆಗೆ ಮಂಗಳೂರಿನ ಬಂಗ್ರ ಕೂಳೂರುನಲ್ಲಿರುವ ಗೋಲ್ಡ್ ಫಿಂಚ್ ಸಿಟಿ ಯಲ್ಲಿ ಅದ್ದೂರಿಯಲ್ಲಿ ಹಾಗೂ ಚಾರಿತ್ರಿಕ ರೀತಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.ಈ ಚಾರಿತ್ರಿಕ ಸಮಾವೇಶದಲ್ಲಿ ಸುಮಾರು 1.5 ಲಕ್ಷಕ್ಕೂ ಮಿಕ್ಕಿ ಮಹಿಳೆಯರು ನೀಲಿ ಬಣ್ಣದ ಸಮವಸ್ತ್ರದಲ್ಲಿ ಭಾಗವಹಿಸಲಿದ್ದಾರೆ ಎಂದು ಡಾ| ಎಂ. ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಸಮಾವೇಶದ ಸಂಘಟಕ ಎಸ್ ಸಿಡಿಸಿಸಿ ಬ್ಯಾಂಕ್ ನ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಮಾತನಾಡುತ್ತಾ, 2000ನೇ ಇಸವಿಯ ಜನವರಿ 29ರಂದು ಆರಂಭ ಗೊಂಡ ನವೋದಯ ಸ್ವ ಸಹಾಯ ಗುಂಪುಗಳು ಮಹಿಳಾ ಸಶಕ್ತತೆ,ಆರ್ಥಿಕ ಸ್ವಾವಲಂಬನೆಯ ನಿಟ್ಟಿನಲ್ಲಿ ರಾಜ್ಯದಲ್ಲಿ ಕ್ರಾಂತಿಕಾರಿ ಹೆಜ್ಜೆಯಾಗಿದೆ.ಸಂಸ್ಥಾಪಕ ರಾಜೇಂದ್ರ ಕುಮಾರ್ ಅವರ ಕನಸಿನಂತೆ ಅಭೂತ ಪೂರ್ವ ರಜತ ಸಂಭ್ರಮ ನಡೆಯಲಿದೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ.. ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರು ಹಾಗೂ ನವೋದಯ ಗ್ರಾಮ ವಿಕಾಸ ಟ್ರಸ್ಟ್(ರಿ.) ಮಂಗಳೂರು ಇದರ ಸಂಸ್ಥಾಪಕ ರಾದ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಇವರು ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು ಎಂದವರು ತಿಳಿಸಿದ್ದಾರೆ.
ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಮಾನ್ಯ ರಾಜ್ಯಸಭಾ ಸದಸ್ಯರಾದ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಲಿರುವರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ಮಾನ್ಯ ಸಹಕಾರ ಸಚಿವರಾದ ಕೆ. ಎನ್. ರಾಜಣ್ಣ. ಕರ್ನಾಟಕ ಸರಕಾರದ ಮಾನ್ಯ ಮಾಜಿ ಮುಖ್ಯ ಮಂತ್ರಿಗಳಾದ ಡಾ| ಎಂ. ವೀರಪ್ಪ ಮೊಯ್ಲಿ, ಕರ್ನಾಟಕ ಸರಕಾರದ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳರ್. ರಾಜ್ಯದ ಮಾನ್ಯ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶ ನಾಲಯ, ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ. ಹಾಗೂ ರಾಜ್ಯದ ಮಾನ್ಯ ಅಬಕಾರಿ ಸಚಿವರಾದ ಆರ್.ಬಿ. ತಿಮ್ಮಾಪುರ ಅವರು ಭಾಗವಹಿಸಲಿದ್ದಾರೆ ಎಂದುಡಾ| ಎಂ. ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಈಸಂದರ್ಭದಲ್ಲಿ ಎಸ್ ಸಿ ಡಿಸಿಸಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಿ.ದೇವಿ ಪ್ರಸಾದ್ ಶೆಟ್ಟಿ ಬೆಳಪು ಮೊದಲಾದವರು ಉಪಸ್ಥಿತರಿದ್ದರು.

news-details