ಮಂಗಳೂರು, ಅಕ್ಟೋಬರ್ 9,ಹರಿಯಾಣ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಮಂಗಳೂರುನಲ್ಲಿ ವಿಜಯೋತ್ಸವ ಆಚರಿಸಲಾಯಿತು.

ಮಂಗಳೂರು

news-details

ಮಂಗಳೂರು, ಅಕ್ಟೋಬರ್ 9,ಹರಿಯಾಣ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಮಂಗಳೂರುನಲ್ಲಿ ವಿಜಯೋತ್ಸವ ಆಚರಿಸಲಾಯಿತು.

ನಗರದ ಪಿವಿಎಸ್ ವ್ರತ್ತದ ಬಳಿ ಇರುವ ಬಿಜೆಪಿ ಕಚೇರಿ ಮುಂಭಾಗದಲ್ಲಿ ಬಿಜೆಪಿ ಕಾರ್ಯಕರ್ತರು ಸಿಹಿ ತಿಂಡಿ ಹಂಚಿ ಸಂಭ್ರಮಿಸಿದರು.

ಈ ವೇಳೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ ಹರಿಯಾಣ ಚುನಾವಣೆ ಯಲ್ಲಿ ಎಲ್ಲಾ ಸಮೀಕ್ಷೆಗಳು ಸುಳ್ಳಾಗಿಸಿ ಬಿಜೆಪಿ ಹ್ಯಾಟ್ರಿಕ್ ಸಾಧನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ವನ್ನು ಜನರು ಮೆಚ್ಚಿ ಕೊಂಡು ಮತ್ತೊಮ್ಮೆ ಬಿಜೆಪಿ ಗೆ ಅವಕಾಶ ಮಾಡಿದ್ದಾರೆ. ಜಂಮ್ಮು ಕಾಶ್ಮೀರ ಚುನಾವಣೆ ಯಲ್ಲಿಯೂ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ಮುಂದೆ ಮಹಾರಾಷ್ಟ್ರ ಚುನಾವಣೆ ಯಲ್ಲಿಯೂ ಬಿಜೆಪಿ ಪ್ರಚಂಡ ಜಯಭೇರಿ ಗಳಿಸಲಿದೆ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ ಹರಿಯಾಣ ಚುನಾವಣೆ ಯಲ್ಲಿ ಪಕ್ಷ ಜಯಭೇರಿ ಗಳಿಸಿರುವುದು ಪ್ರಧಾನಿ ನರೇಂದ್ರ ಮೋದಿ ನಾಯಕತ್ವಕ್ಕೆ ಸಿಕ್ಕಿದ ಗೆಲುವು ಆಗಿದೆ. ದೇಶದೆಲ್ಲೆಡೆ ಬಿಜೆಪಿ ಪರ ಅಲೆ ಇದೆ. ಕರ್ನಾಟಕ ದಲ್ಲಿಯೂ ಮುಂದೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ಬಿಜೆಪಿ ಮುಖಂಡರಾದ ಜಗದೀಶ ಶೇಣವ, ಕಿರಣ್ ಕೋಡಿಕಲ್, ಸಂದೀಪ್ ಗರೋಡಿ, ಗುರುಪ್ರಸಾದ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

news-details