ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಮಹಾಮಂಡಳ ನಿ., ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಗೊಂಡ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಇವರನ್ನು ಎಸ್ ಸಿಡಿಸಿಸಿ ಬ್ಯಾಂಕ್ ನ ಆಡಳಿತ ಮಂಡಳಿ ಸಭೆಯಲ್ಲಿ ಸೋಮವಾರ ಅಭಿನಂದಿಸಲಾಯಿತು.
ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರಕುಮಾರ್ ಅವರು ದೇವಿಪ್ರಸಾದ್ ಶೆಟ್ಟಿ ಬೆಳಪು ಅವರನ್ನು ಬ್ಯಾಂಕಿನ ಆಡಳಿತ ಮಂಡಳಿಯ ಪರವಾಗಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ. ಜಿ. ರಾಜರಾಮ್ ಭಟ್, ಭಾಸ್ಕರ್.ಎಸ್. ಕೋಟ್ಯಾನ್, ಎಂ. ವಾದಿರಾಜ ಶೆಟ್ಟಿ ಶಶಿಕುಮಾರ್ ರೈ ಬಿ., ಎಸ್. ಬಿ. ಜಯರಾಮ್ ರೈ, ಅಶೋಕ್ ಕುಮಾರ್ ಶೆಟ್ಟಿ, ಎಂ.ಮಹೇಶ್ ಹೆಗ್ಡೆ, ಜೈರಾಜ್ ಬಿ. ರೈ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಎಸ್. ಎನ್. ಮನ್ಮಥ, ಕುಶಾಲಪ್ಪ ಗೌಡ, ಸಹಕಾರ ಸಂಘಗಳ ಉಪನಿಬಂಧಕರಾದ ಎಚ್. ಎನ್. ರಮೇಶ್, ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.