<p>ಮಂಗಳೂರು, ಅಕ್ಟೋಬರ್ 10,ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ಅದ್ದೂರಿಯಾಗಿ ನಡೆದ ಕುಡ್ಲದ ಪಿಲಿಪರ್ಬ-2024 ಸೀಸನ್-3 ಮುಕ್ತಾಯಗೊಂಡಿದ್ದು,10 ತಂಡಗಳ ನಡುವಿನ ಜಿದ್ದಾಜಿದ್ದಿನ ಸ್ಪರ್ಧಾಕೂಟದಲ್ಲಿ ಅಂತಿಮವಾಗಿ ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡವು ಪಿಲಿಪರ್ಬ- 2024 ರ ಕಿರೀಟ ಮುಡಿಗೇರಿಸಿಕೊಂಡಿತು.</p>
<p>ದ್ವಿತೀಯ ಸ್ಥಾನದ ಪ್ರಶಸ್ತಿಯನ್ನು ಪುರಲ್ದಪ್ಪೆನ ಮೋಕೆದ ಬೊಳ್ಳಿಲು ಪೊಳಲಿ ಟೈಗರ್ಸ್ ತಂಡವು ಪಡೆದುಕೊಂಡರೆ, ನಂದಿಗುಡ್ಡ ಫ್ರೆಂಡ್ಸ್ ಬಾಬುಗುಡ್ಡೆ ಹಾಗೂ ಟೀಮ್ ಕಲ್ಲೇಗ ಟೈಗರ್ಸ್ ಪುತ್ತೂರು ತಂಡಗಳು ಜಂಟಿಯಾಗಿ ತೃತೀಯ ಸ್ಥಾನವನ್ನು ಅಲಂಕರಿಸಿದವು.</p>
<p>ಪಿಲಿಪರ್ಬದ ವಿಶೇಷ ಬಹುಮಾನಗಳಾದ